
ಬೆಳಗಾವಿ ಲೋಕಸಭೆ BJP ಗೆಲ್ಲೊದು ಗ್ಯಾರಂಟಿ..ಬಾಲಚಂದ್ರ
ಗೋಕಾಕ- ಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.ಗುರುವಾರ ಸಂಜೆ ನಗರದ ಬ್ಯಾಳಿ ಕಾಟಾ ಹತ್ತಿರ ಇರುವ ಎನ್ಎಸ್ಎಫ್ ಕಛೇರಿಯಲ್ಲಿ ಜರುಗಿದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಸಮೀಕ್ಷೆಗಳು ಕೂಡ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ತಮ್ಮ ಅಂಕಿ- ಅಂಶಗಳನ್ನು ನೀಡಿವೆ ಎಂದು ತಿಳಿಸಿದರು….