ನವದೆಹಲಿ:
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಯನ್ನ ಮರು ಸೇರ್ಪಡೆಯಾಗಿದ್ದಾರೆ.
ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮಾತುಕತೆ ವೇಳೆ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಶೆಟ್ಟರ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶೆಟ್ಟರ್ ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು. ಮತ್ತೊಂದು ಮೂಲಗಳ ಪ್ರಕಾರ ಶೆಟ್ಟರ್ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸುವ ಸಾಧ್ಯತೆಗಳಿವೆ.