ಮಹಾಂತೇಶ ಕೌಜಲಗಿ ಮತ್ತು ರಾಜು ಕಾಗೆಗೆ ಒಲಿದ ನಿಗಮ ಮಂಡಳಿ
32 ಶಾಸಕರಿಗೆ ನಿಗಮಮಂಡಳಿ. ಕಾರ್ಯಕರ್ತರಿಗೆ ಕೈಕೊಟ್ಟ ಸಿದ್ದು ಸರ್ಕಾರ.
ಬೆಳಗಾವಿ. ಚುನಾವಣೆ ಸಂದರ್ಭದಲ್ಲಿ ಕಾರ್ಯಕರ್ತರೇ ದೇವರು ಎನ್ನುವ ಕಾಂಗ್ರೆಸ್ ನಿಗಮ ಮಂಡಳಿಗೆ ನೇಮಕ ಮಾಡುವ ಸಂದರ್ಭದಲ್ಲಿ ಅವರಿಗೆ ಕೈ ಕೊಟ್ಡು ಶಾಸಕರಿಗೆ ಜೈ ಎಂದಿದ್ದಾರೆ.
ಕಳೆದ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ರಾತ್ರಿ ಹಗಲು ಶ್ರಮಿಸಿದ್ದ ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಸಿಗಬಹುದು ಎಂದು ನಿರೀಕ್ಷಿಸಲಾಗಿತ್ತು..
ಅದರೆ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ಪಟ್ಟಿಯಲ್ಲಿ ಕಾರ್ಯಕರ್ತರ ಬದಲು 32 ಜನ ಶಾಸಕರಿಗೆ ಮಣೆ ಹಾಕಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಕೂಡ ಕಾಗವಾಡ ಶಾಸಕ ರಾಜು ಕಾಗೆ ಮತ್ತು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ನಿಗಮ ಮಂಡಳಿ ಭಾಗ್ಯ ದೊರೆತಿದೆ.

ಕಾಗವಾಡ ಶಾಸಕ ರಾಜು ಕಾಗೆ ಅವರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಹಿಂದೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ರಾಜು ಕಾಗೆ ಅವರು ಹಿರಿಯ ಶಾಸಕರಲ್ಲಿ ಒಬ್ಬರು.

ಇನ್ನೂ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಪ್ರಮುಖವಾಗಿ. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಅರಸೀಕೆರೆ ಶಾಸಕ ಶಿವಲಿಂಗೆಗೌಡ, ಬಾಗಲಕೋಟೆ ಶಾಸಕ ಹೆಚ್ ವೈ ಮೇಟಿ, ಮುದ್ದೆಬಿಹಾಳ ಶಾಸಕ ಅಪ್ಪಾಜಿ ನಾಡಗೌಡ, ಕೆಜಿಎಫ್ ಶಾಸಕಿ ರೂಪಕಲಾ ಇದ್ದಾರೆ.

ಇನ್ನೂ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಹು,ಧಾ ಪೂರ್ವ ಶಾಸಕ ಪ್ರಸಾದ್ ಅಬ್ಬಯ್ಯ, ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ಕಂಪ್ಲಿ ಗಣೇಶ್, ಆನೆಕಲ್ ಶಾಸಕ ಬಿ. ಶಿವಣ್ಣ ಸೇರಿದಂತೆ ಅನೇಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಸ್ಥಾನ ಲಭಿಸಿದೆ.