Headlines

ಕೇಂದ್ರದ ಯೋಜನೆಗೆ ರಾಜ್ಯದ ಸ್ಪಂದನೆ- ಸತೀಶ್

ಕೇಂದ್ರದ ಯೋಜನೆಗಳಿಗೆ ರಾಜ್ಯ ಸ್ಪಂದಿಸುತ್ತಿಲ್ಲ ಎಂಬುವುದು ಸುಳ್ಳು: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕೇಂದ್ರ ಸರ್ಕಾರದ ಯೋಜನೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬುದುವುದು ಸುದ್ಧ ಸುಳ್ಳು. ನಮ್ಮದೇ ಇಲಾಖೆಗೆ ಸಂಬಂಧಿಸಿದಂತೆ ಅನೇಕ ಬಾರಿ ಕೇಂದ್ರ ಸಚಿವಾರಾದ ನಿತೀನ್‌ ಗಟ್ಕರಿ ಹಾಗೂ ಪ್ರಲ್ಹಾದ್‌ ಜೋಶಿ ಅವರೊಂದಿಗೆ ಸಭೆ ನಡೆಸಿದ್ದೇನೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯೇ ನೀಡಿದ ಅವರು, ಯಾವುದೇ ಒಂದು ಕಾಮಗಾರಿಗೆ ಸಮಸ್ಯೆಯಾದರೆ ಎಲ್ಲಾ ಕಾಮಗಾರಿಗಳಿಗೆ ಸಹಕಾರ ನೀಡುತ್ತಿಲ್ಲವೆಂಬುವುದು ತಪ್ಪು. ಬೆಳಗಾವಿ ನಗರಕ್ಕೆ ಸಂಬಂಧಿಸಿದ ರಿಂಗ್‌ ರಸ್ತೆ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೇ ಪೂರ್ಣಗೊಳಿಸಲು ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದೇವೆ ಎಂದು ತಿಳಿಸಿದರು

ಧಾರವಾಡ-ಬೆಳಗಾವಿ ರೈಲು ಮಾರ್ಗ ನಿರ್ಮಾಣ ಆಗುತ್ತಿರುವುದು ಸಂತಸದ ವಿಚಾರ. ಆದರೆ ಬೆಳಗಾವಿ-ಕೊಲ್ಹಾಪುರ-ಸತಾರ- ರೈಲು ಮಾರ್ಗ ನಿರ್ಮಾಣದ ಯೋಜನೆ ಕಳೆದ 30 ವರ್ಷಗಳ ಹಿಂದಿನ ಯೋಜನೆ. ಅಭಿವೃದ್ಧಿ ಯೋಜನೆಗೆ ರಾಜ್ಯ ಸರ್ಕಾರ ಯಾವಾಗಲು ಹಿಂದೇಟು ಹಾಕಲ್ಲವೆಂದು ಸ್ಪಷ್ಟನೆ ನೀಡಿದರು.

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಪ್ರತಿಕ್ರಿಯೆ ನೀಡಿ, ಚುನಾವಣೆ ಎಂದರೆ ಮೋಡ ಇದ್ದ ಹಾಗೆ, ಮೋಡ, ಗಾಳಿ, ಮಳೆ ಬರುತ್ತದೆ. ಇನ್ನೊಂದು ಕಡೆ ಕಡಿಮೆ ಮಳೆಯೂ ಬೀಳಬಹುದು. ಈಗ ಅದೇ ರೀತಿ ನಡೆದಿದೆ. ಎರಡು ತಿಂಗಳು ಪಕ್ಷಾಂತರ ಸಹಜ. ಚುನಾವಣೆ ಸಮಯದಲ್ಲಿ ಒತ್ತಡಗಳು ಬರುವುದು ಸಹಜ. ಜಗದೀಶ್ ಶೆಟ್ಟರ್ ಯಾವ ಕಾರಣಕ್ಕೆ ಪಕ್ಷ ಬಿಟ್ಟಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದರು.

ಇನ್ನು ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಜಗದೀಶ್ ಶೆಟ್ಟರ್ ಅವರು ಲೋಕಸಭೆ ಚುನಾವಣೆಯಲ್ಲಿ ಯಾವ ಕೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುವುದು ನನಗೆ ಗೊತ್ತಿಲ್ಲ. ಅದು ಅವರ ಪಕ್ಷದ ನಿರ್ಧಾರ. ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ನಮಗೆ ಅಭ್ಯಂತರವಿಲ್ಲ. ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನದ ಆಫರ್ ನೀಡಿರುವುದು ನನಗೆ ಮಾಹಿತಿ ಇಲ್ಲ. ಉಪಮುಖ್ಯಮಂತ್ರಿ ಸ್ಥಾನದ ಬೇಡಿಕೆಯ ಬಗ್ಗೆ ಲೋಕಸಭಾ ಚುನಾವಣೆ ಮುಗಿದ ಮೇಲೆ ನೋಡುತ್ತೇವೆ. ಈಗ ಅದರ ಬಗ್ಗೆ ಚರ್ಚೆ ಮಾಡಲ್ಲ. ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲುವುದೇ ನಮ್ಮ ಗುರಿಯಾಗಿದೆ ಎಂದರು.

ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ರಾಷ್ಟ್ರೀಯ ಹೆದ್ದಾರಿ-48 ಗಾಂಧಿ ನಗರದಿಂದ ರಾಣಿ ಚನ್ನಮ್ಮಾ ವೃತ್ತದವರೆಗೆ ಅಂದಾಜು 350 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಿಸಲು ಯೋಜಿಸಲಾಗಿದೆ.
ಪ್ರಸ್ತುತ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿರುವ ವಿವಿಧ ಇಲಾಖೆಗಳ ಕಟ್ಟಡಗಳನ್ನು ತೆರವುಗೊಳಿಸಿ ಒಂದು ಸುಸಜ್ಜಿತವಾದ ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡವನ್ನು ಅಂದಾಜು 200 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಕೊಳ್ಳಲಾಗುತ್ತಿದೆ. ಹುದಲಿ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಇರುವ ಮ್ಯಾನುವಲ್ ರೈಲ್ವೆ ಗೇಟ್‌ನ್ನು, ರೈಲ್ವೆ ಮೇಲ್ಸೇತುವೆಯನ್ನಾಗಿ ಪರಿವರ್ತಿಸಲು ರೂ.35 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗುವುದು ಎಂಬ ಮಾಹಿತಿ ನೀಡಿದರು.

ನಿಲಜಿಯಿಂದ ಸಾಂಬ್ರಾ ವಿಮಾನ ನಿಲ್ದಾಣವರೆಗೆ ದ್ವಿಪಥದಿಂದ ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ರೂ. 58 ಕೋಟಿಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಶೀಘ್ರವಾಗಿ ಅನುಮೋದನೆ ಪಡೆದುಕೊಂಡು ಕಾರ್ಯಗತಗೊಳಿಸಲಾಗುವುದು. ಬೆಳಗಾವಿ ನಗದರಲ್ಲಿ ಒಂದು ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲು ವಿಸ್ತೃತವಾದ ಯೋಜನೆಯನ್ನು ರೂ.60 ಕೋಟಿ ಅಂದಾಜು ಮೊತ್ತದ ಯೋಜನೆ ತಯಾರಿಸಲಾಗಿದ್ದು, ಪ್ರಸಕ್ತ 2023-24ನೇ ಸಾಲಿನಲ್ಲಿ ರೂ.10 ಕೋಟಿಗಳಲ್ಲಿ ಕಾಮಗಾರಿಯನ್ನು ಕೈಗೊಂಡು ಮುಂಬರುವ ಸಾಲಿನಲ್ಲಿ ಹಂತ ಹಂತವಾಗಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಆಸೀಪ್‌ (ರಾಜು) ಸೇಠ್‌, ಮಹೇಂದ್ರ ತಮ್ಮಣ್ಣವರ್‌, ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೋಲಿಸ್ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿ.ಪಂ ಸಿಇಓ ರಾಹುಲ್ ಶಿಂಧೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್‌ ಹಣಮನ್ನವರ್ ಇದ್ದರು.

Leave a Reply

Your email address will not be published. Required fields are marked *

error: Content is protected !!