ಚುನಾವಣೆ ಘೋಷಣೆ
ನವದೆಹಲಿ ರಾಜ್ಯಸಭೆಯ 56 ಸ್ಥಾನಗಳಿಗೆ ಚುನಾವಣೆ ಘೋಷಣೆ! 15 ರಾಜ್ಯಗಳ ರಾಜ್ಯಸಭೆಯ 56 ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. 56 ಸದಸ್ಯರ ಅಧಿಕಾರಾವಧಿಯು ಏಪ್ರಿಲ್ ನಲ್ಲಿ ಮುಕ್ತಾಯಗೊಳ್ಳಲಿದ್ದು, ಕರ್ನಾಟಕದಲ್ಲಿ 4 ಸ್ಥಾನ ಸೇರಿದಂತೆ ಒಟ್ಟು 15 ರಾಜ್ಯಗಳಲ್ಲಿ ಈ ಚುನಾವಣೆ ನಡೆಯಲಿದೆ ಎಂದು ಅದು ತಿಳಿಸಿದೆ.