ಶಿಕ್ಷಕರ ಕ್ಷೇತ್ರದ ಅಭಿವೃದ್ಧಿ, ಮಾದರಿ ಶಾಲೆಗೆ ಸರ್ಕಾರ ಪಣ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ” ಶಿಕ್ಷಕರ ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ಧರಾಮಯ್ಯನವರ ಸರ್ಕಾರ ಸ್ಪಂದಿಸಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳು ರಾಜ್ಯದಲ್ಲಿ ಮಾದರಿ ಶಾಲೆಗಳು ನಿರ್ಮಾಣವಾಗಬೇಕೆಂಬ ಉದ್ದೇಶದಿಂದ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ” ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು.

ಇಲ್ಲಿನ ಮಹಾವೀರ ಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ (ರಿ) ವತಿಯಿಂದ ಆಯೋಜಿಸಲಾದ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಗಾರ ಹಾಗೂ ಮಹಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು,
ಸಮಾಜಕ್ಕೆ ಶಿಕ್ಷಕರ ಕೊಡುಗೆ ಅಪಾರವಾಗಿದೆ. ಹೀಗಾಗಿ ಶಿಕ್ಷಕರ ಸಮಸ್ಯೆಗಳನ್ನು ಬಗೆ ಹರಿಸಲು ಸರ್ಕಾರ ಮಟ್ಟದಲ್ಲಿ ಕೆಲಸಗಳು ನಡೆಯಲಿವೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸಾಧ್ಯವಾದಷ್ಟು ಲೋಕೊಪಯೋಗಿ ಇಲಾಖೆಯಿಂದ ಪ್ರಯತ್ನ ಮಾಡಲಾಗುತ್ತಿದೆ. ಕನ್ನಡ ಸರ್ಕಾರ ಶಾಲೆಗಳು ಮಾದರಿ ಮಾಡೋಣ ಅದಕ್ಕೆ ಶಿಕ್ಷಕರ ಸಹಕಾರ ಅಗತ್ಯವಾಗಿದೆ ಎಂದರು.

ಎಂಎಲ್‌ಸಿ ಪ್ರಕಾಶ ಹುಕ್ಕೇರಿ ಅವರು ಮಾತನಾಡಿ, ಶಿಕ್ಷಕರ ಸೇವೆ ಮಾಡಬೇಕೆಂಬ ಮನೋಭಾವನೆ ಈ ಕ್ಷೇತ್ರಕ್ಕೆ ಬಂದಿದ್ದೆ. ಶಿಕ್ಷಕರು ನನ್ನ ಕೈ ಹಿಡಿದು ಬಹುಮತದಿಂದ ಆಯ್ಕೆ ಮಾಡಿದ್ದಿರಿ, ನಮ್ಮ ಅಧಿಕಾರ ಅವಧಿವರೆಗೂ ಈ ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಆದಷ್ಟು ಬೇಗ ಶಿಕ್ಷಕರ ಸಮಸ್ಯೆ ಇತ್ಯರ್ಥ ಮಾಡಲಾವುದು, ಹೀಗಾಗಿ ಸಿಎಂ, ಡಿಸಿಎಂ ಅವರ ಒಂದು ಸುತ್ತಿನ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣ 12 ಕೋಟಿ ರೂ. ನೀಡಲಾಗುವುದು. ಒಂದು ಕೋಟಿ ರೂ. ವೆಚ್ಚದಲ್ಲಿ ಚಿಕ್ಕೋಡಿಯಲ್ಲಿ ಗುರುಭವನ ನಿರ್ಮಾಣ ಮಾಡಲಾಗುವುದು. ಅದರಂತೆ
ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಗುರು ಭವನ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎಸ್ ಡಿ. ಗಾಡಿ , ಉಮಾದೇವಿ ಹಿರೇಮಠ ಹಾಗೂ ಇತರರು ಇದ್ದರು.