Headlines

ಮಂದಿರ ಉದ್ಘಾಟಿಸಿದ MLC ಚನ್ನರಾಜ

ಸೋನೋಲಿಯಲ್ಲಿ ನೂತನ ಮಂದಿರ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸೋನೋಲಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಬ್ರಹ್ಮಲಿಂಗ ಮಂದಿರದ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಡೀ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಅವಕಾಶ ನಮಗೆ ಸಿಕ್ಕಿದೆ. ಸಹೋದರಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶಾಸಕರಾದ ನಂತರ ಕ್ಷೇತ್ರದ ಅಭಿವೃದ್ಧಿಯ ದಿಕ್ಕು ಬದಲಾಗಿದೆ. ಈಗ ಅವರು ಸಚಿವರಾದ ನಂತರ ಎಲ್ಲರ ಸಹಕಾರದಿಂದ ಇನ್ನಷ್ಟು ಯೋಜನೆಗಳನ್ನು ತರುವ ಪ್ರಯತ್ನ ಮಾಡುತ್ತಿದ್ದಾರೆ. ಎಲ್ಲರೂ ಒಂದೇ ಕುಟುಂಬದಂತೆ ಇದ್ದು, ಮುಂದಿನ ದಿನಗಳಲ್ಲಿ ಸಚಿವರ ಕೈಯನ್ನು ಮತ್ತಷ್ಟು ಬಲಪಡಿಸೋಣ ಎಂದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ಮನೋಹರ್ ಬೆಳಗಾಂವ್ಕರ್, ಮಾರುತಿ ಪಾಟೀಲ, ಗುರುನಾಥ್ ಪಾಟೀಲ, ಬಾಳು ಜಾಂಗ್ರೂಚೆ, ಶಿವಾಜಿ ಕೆ. ಗುರುನಾಥ್ ಜಾಂಗ್ರೂಚೆ, ನಾರಾಯಣ ಪಾಟೀಲ, ಮಾರುತಿ ಕನಗುಟ್ಕರ್, ಭರ್ಮಾ ಪಾಟೀಲ ಹಾಗೂ ಮಂದಿರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!