ಸತೀಶ್ ಪ್ರಯತ್ನ- ಬೆಳಗಾವಿಗೆ ಬಂಪರ್

ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಬೆಳಗಾವಿಗೆ ವಿಶೇಷ ಕೊಡುಗೆ

ಬೆಳಗಾವಿಯಲ್ಲಿ ವಾಹನ ಸಂಚಾರ ದಟ್ಟಣೆ ನಿವಾರಿಸಲು 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ ಗ್ರಿನ್‌ ಸಿಗ್ನಲ್ ಕೊಟ್ಟ ಸಿಎಂ
ಬೆಳಗಾವಿ: ಈ ಭಾರಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ 2024-25ರ ಕರ್ನಾಟಕ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

.. ಈ ಭಾರಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ವಿಶೇಷ ಪ್ರಯತ್ನದಿಂದ ರಾಜ್ಯಕ್ಕೆ ಸಿಎಂ ಸಿದ್ದರಾಮಯ್ಯ ಬಂಪರ್‌ ಕೊಡುಗೆ ನೀಡಿದ್ದಾರೆ.
ಪ್ರಮುಖ ಅಂಶಗಳು: ಪ್ರಸಕ್ತ ಸಾಲಿನಲ್ಲಿ ಕೆಶಿಪ್-4 ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 875 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಯನ್ನು ಬಾಹ್ಯ ಹಣಕಾಸು ಸಂಸ್ಥೆಯ ನೆರವಿನೊಂದಿಗೆ 5,736 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುವುದು.

  • ರಾಜ್ಯದಲ್ಲಿನ 1,300 ಕಿ.ಮೀ. ಉದ್ದದ ಪ್ರಮುಖ ರಸ್ತೆಗಳನ್ನು 4,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಪ್ರಸಕ್ತ ಸಾಲಿನಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ (SHDP) ಹಂತ-5ನ್ನು ಪ್ರಾರಂಭಿಸಲಾಗುವುದು.
  • ಬೆಂಗಳೂರು-ಮಂಡ್ಯ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೈಸೂರು ಹೊರವಲಯದಲ್ಲಿರುವ ಜಂಕ್ಷನ್ನಲ್ಲಿ ವಾಹನ ಸಂಚಾರ ದಟ್ಟಣೆಯನ್ನು ನೀಗಿಸಲು ಎನ್.ಹೆಚ್.ಎ.ಐ ಸಹಯೋಗದೊಂದಿಗೆ ಮೇಲುಸೇತುವೆ ನಿರ್ಮಾಣ ಮಾಡಲಾಗುವುದು.
  • ಮೈಸೂರಿನ ಕುಕ್ಕರಹಳ್ಳಿ ಬಳಿ ಹಾಗೂ ಕೆ.ಆರ್.ಎಸ್. ರಸ್ತೆ, ಶಿವಮೊಗ್ಗ-ಬೊಮ್ಮನಕಟ್ಟೆ ರಸ್ತೆ, ಗದಗ ಜಿಲ್ಲೆಯ ರೋಣದ ಮಲ್ಲಾಪುರ, ಚನ್ನಪಟ್ಟಣ-ಬೈರಾಪಟ್ಟಣ ಮಾರ್ಗ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 6 ರೈಲ್ವೆ ಮೇಲು ಹಾಗೂ ಕೆಳಸೇತುವೆಗಳ ನಿರ್ಮಾಣವನ್ನು 350 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗುವುದು.
  • ಸಮರ್ಪಿತ ಆರ್ಥಿಕ ಕಾರಿಡಾರ್ಗಳು ಆರ್ಥಿಕ ಅಭಿವೃದ್ಧಿಗೆ ಪೂರಕ ಮೂಲಸೌಕರ್ಯ ಜಾಲವನ್ನು ಒದಗಿಸುತ್ತವೆ. ರಾಜ್ಯದ ಮೂಲಕ ಹಾದು ಹೋಗುವ ಮುಂಬೈ-ಚೆನ್ನೈ ಕಾರಿಡಾರ್ನಲ್ಲಿ ನಾವು ಹಲವಾರು ಕೈಗಾರಿಕಾ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಂಡಿದ್ದೇವೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವು ಎರಡು ಆರ್ಥಿಕ ಕಾರಿಡಾರ್ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಒಂದು ಕಾರಿಡಾರ್ ಮಂಗಳೂರು ಬಂದರಿನಿಂದ ಬೆಂಗಳೂರು ವರೆಗೆ ಅಭಿವೃದ್ಧಿಪಡಿಸಲಾಗುವುದು. ಇದರಿಂದ ಬಂದರು ಸಂಪರ್ಕ ಸುಲಭವಾಗುವುದಲ್ಲದೆ, ಯುರೋಪ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸರಕು ಸಾಗಾಣಿಕೆ ಅವಧಿ ಗಣನೀಯವಾಗಿ ಕಡಿಮೆಯಾಗಲಿದೆ. ಇನ್ನೊಂದು ಕಾರಿಡಾರ್ ಅನ್ನು ಬೀದರ್ ಹಾಗೂ ಬೆಂಗಳೂರು ನಡುವೆ ಅಭಿವೃದ್ಧಿಪಡಿಸುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಚುರುಕುಗೊಳಿಸಲಾಗುವುದು ಎಂದು ಬಜಟನಲ್ಲ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!