ಕೇಂದ್ರ ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ರಾ.ಸ.ಸ.ಕಾ.ಮ
ಮಂಡಳಿ ನಿರ್ದೇಶಕ ಅಶೋಕ ಪಾಟೀಲ
ಗೋಕಾಕ-
ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ನವದೆಹಲಿಯ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಶೋಕ ಪಾಟೀಲ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳಿಯ ನೂತನ ಅಧ್ಯಕ್ಷ- ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಅಶೋಕ ಪಾಟೀಲ ಅವರನ್ನು ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರುಗಳು ಅಭಿನಂದಿಸಿದ್ದಾರೆ.