ಖಾನಾಪುರ
ತಾಲೂಕಿನ ಬೀಡಿ-ಕಿತ್ತೂರ ರಸ್ತೆಯಲ್ಲಿ ಮರಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟ ಮಾಹಿತಿ ಇದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಖಾನಾಪುರ ತಾಲ್ಲೂಕಿನ ನಂದಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಕಿತ್ತೂರಿನಿಂದ ಬೀಡಿ ಗ್ರಾಮದತ್ತ ಹೊರಟಿದ್ದ ಪ್ರಯಾಣಿಕರ ಕಾರು ಮಂಗೇನಕೊಪ್ಪ ಗ್ರಾಮದ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ವೇಗವಾಗಿ ಅಪ್ಪಳಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಆರೇಳು ಜನರು ಪ್ರಯಾಣಿಸುತ್ತಿದ್ದ ಮಾಹಿತಿ ಇದ್ದು, ನಾಲ್ವರು ಮೃತಪಟ್ಟಿದ್ದಾರೆ. ಉಳಿದವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿಯೂ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.