Headlines

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಪ್ರಗತಿ ಸಾಧ್ಯ: ರಾಹುಲ್‌ ಜಾರಕಿಹೊಳಿ

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಪ್ರಗತಿ ಸಾಧ್ಯ: ರಾಹುಲ್‌ ಜಾರಕಿಹೊಳಿ

5 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ- ಡಾ.ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ನೂತನ ಶಾಖೆ ಉದ್ಘಾಟನೆ

ಯಮಕನಮರಡಿ:

ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಅಭಿವೃದ್ಧಿಯಾದರೆ ಅದು ಪ್ರಗತಿಯ ಸಂಕೇತವಾಗಿದ್ದು, ನಾಗರಿಕರ ಸಂಚಾರಕ್ಕೆ ಅಗತ್ಯವಾಗಿದೆ ಎಂದು ಸತೀಶ್‌ ಶುಗರ್ಸ್‌ ನಿರ್ದೇಶಕ, ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ಹೇಳಿದರು.

ಯಮಕನಮರಡಿ ಮತಕ್ಷೇತ್ರದ ಗುಜನಟ್ಟಿ ಕ್ರಾಸ್‌ದಿಂದ ಹಂದಿಗನೂರ ಗ್ರಾಮದವರಗೆ ಅಂದಾಜು 5 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ, ಕೇದನೂರ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಯಮಕನಮರಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ತಂದೆ, ಸಚಿವ ಸತೀಶ್‌ ಜಾರಕಿಹೊಳಿ ಅವರು ಆದ್ಯತೆ ನೀಡಿದ್ದು, ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಮೂಲಕ ನಿಮ್ಮ ಆಶೋತ್ತರಗಳನ್ನು ಈಡೇರಿಸಿದ್ದಾರೆ. ಕ್ಷೇತ್ರದಲ್ಲಿ ಕುಡಿಯಲು ನೀರು, ರಸ್ತೆಗಳು ಸೇರಿದಂತೆ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಗುಣಮಟ್ಟದಿಂದ ತ್ವರಿತವಾಗಿ ರಸ್ತೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

ಡಾ.ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ನೂತನ ಶಾಖೆ ಉದ್ಘಾಟನೆ: ಯಮಕನಮರಡಿ ಮತಕ್ಷೇತ್ರದ ಸುತಗಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ನೂತನ ಶಾಖೆಯನ್ನು ಯುವ ನಾಯಕ ರಾಹುಲ್‌ ಜಾರಕಿಹೊಳಿ ಉದ್ಘಾಟಿಸಿದರು.

ನಂತರ ಮಾತನಾಡಿದ ಯುವ ನಾಯಕ ರಾಹುಲ್‌ ಜಾರಕಿಹೊಳಿ, ಡಾ. ಬಿಆರ್.‌ ಅಂಬೇಡ್ಕರ್ ಅವರ ಹೆಸರು ಹೇಳಿ ಬದುಕುವ ಬದುಕು ನಮಗೆ ಬೇಡ. ಅವರ ಕ್ರಾಂತಿಯ ದಾರಿಯಲ್ಲಿ ನಾವೆಲ್ಲರೂ ಸಾಗಿ ಅವರ ಕನಸು-ಆಶಯಗಳನ್ನು ಕಾರ್ಯರೂಪಕ್ಕೆ ತರಬೇಕಾಗಿದೆ. ಜೈ ಭೀಮ್ ಎಂದರೆ ಅಂಬೇಡ್ಕರ್ ಅವರ ಕನಸು ಆಶಯಗಳು ಈಡೇರುವುದಿಲ್ಲ. ನಾವೆಲ್ಲರೂ ವಿದ್ಯಾವಂತರಾಗಿ, ಜಾಗೃತರಾಗಿ ಅಂಬೇಡ್ಕರ್ ರವರ ಚಿಂತನೆ, ವಿಚಾರಧಾರೆ, ಕ್ರಾಂತಿಯ ದಾರಿಯಲ್ಲಿ ನಡೆಯುವ ಮೂಲಕ ಅವರ ಕನಸು ಆಶಯಗಳನ್ನು ಕಾರ್ಯರೂಪಕ್ಕೆ ತರಬೇಕಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್‌, ಯಮಕನಮರಡಿ ಮತಕ್ಷೇತ್ರದ ಗುಜನಟ್ಟಿ, ಹಂದಿಗನೂರ, ಕೇದನೂರ, ಸುತಗಟ್ಟಿ ಗ್ರಾಮದ ಕಾಂಗ್ರೆಸ್‌ ಪಕ್ಷದ ಮುಖಂಡರು, ಹಿರಿಯರು, ಯುವಕರು, ಮಹಿಳೆಯರು ಇದ್ದರು.

Leave a Reply

Your email address will not be published. Required fields are marked *

error: Content is protected !!