ಚುನಾವಣೆ ಎದುರಿಸಲು ನಾವ್ ರೆಡಿ- ಸತೀಶ್
ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸನ್ನದ್ಧ- ಸಚಿವ ಸತೀಶ ಜಾರಕಿಹೊಳಿಬೆಳಗಾವಿ-ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸನ್ನದ್ಧಗೊಂಡಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಇನ್ನೇನು ಬಹಳ ಹತ್ತಿರದಲ್ಲಿದೆ. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ. ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ. ಕಾರ್ಯಕರ್ತರ ಮೇಲೆ ಬಹುದೊಡ್ಡ ಜವಾಬ್ದಾರಿಯಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜೊತೆಗೆ ಎಲ್ಲ ಮುಖಂಡರು ಚುನಾವಣೆಗೆ ಸಿದ್ಧರಾಗಬೇಕು…