Headlines

ನಡ್ಡಾ ಅಧ್ಯಕ್ಷತೆಯಲ್ಲಿ ಹೈಲೆವೆಲ್ ಸಭೆ

ಬೆಳಗಾವಿ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬೆಳಗಾವಿಗೆ ಆಗಮಿಸಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅವರನ್ನು ಪಕ್ಷದ ಅಧ್ಕಕ್ಷ ಬಿ.ವೈ. ವಿಜಯೇಂದ್ರ ಸ್ವಾಗತಿಸಿದರು‌. ಮಾಜಿ ಶಾಸಕ ಸಂಜಯ ಪಾಟೀಲ ಸೇರಿದಂತೆ ಜಿಲ್ಲೆಯ ನಾಯಕರೂ ಸಹ ಈ ಸಂದರ್ಭದಲ್ಲಿ ಹಾಜರಿದ್ದರು.

ನಡ್ಡಾ ಅವರು ಚಿಕ್ಕೊಡಿಗೆ ತೆರಳಿ ಅಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸುವರು. ನಂತರ ಬೆಳಗಾವಿಯ ಕಾಕತಿಗೆ ಆಗಮಿಸಿ ಅಲ್ಲಿನ ಖಾಸಗಿ ಹೊಟೇಲ್ ನಲ್ಲಿ ಕಾರ್ಯಕಾರಿಣಿ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಜಿಲ್ಲೆಗಳ ಟಿಕೆಟ್ ಬಗ್ಗೆ ಚರ್ಚೆ ನಡೆಸಲಿದ್ದಾರೆಂದು ಗೊತ್ತಾಗಿದೆ.

ನಂತರ ಸಂಜೆ 5 ಕ್ಕೆ ಜೀರಗೆ ಸಭಾಭವನದಲ್ಲಿ ಮತ್ತೊಂದು ಸಭೆ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!