Headlines

ಅಭ್ಯರ್ಥಿಗಳನ್ನು ಗೆಲ್ಲಿಸುವುದು ನಮ್ಮ ಜವಾಬ್ದಾರಿ- ಸತೀಶ್

ಬೆಳಗಾವಿ, ಚಿಕ್ಕೋಡಿ ಲೋಕಸಭೆ ಅಭ್ಯರ್ಥಿಗಳನ್ನು ಗೆಲ್ಲಿಸುವುದು ನಮ್ಮ ಜವಾಬ್ದಾರಿ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾಗಿ ನಿಂತರೂ ಗೆಲ್ಲಿಸುವುದು ಮಾತ್ರ ನಮ್ಮ ಜವಾಬ್ದಾರಿ. ಅದೇ ನಿಟ್ಟಿನಲ್ಲಿ ನಾವು ಎಲ್ಲ ರೀತಿಯ ತಯಾರಿ ನಡೆಸಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ನಗರದ ಜಿವೇಶ್ವರ್‌ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರಗಳನ್ನು ಕಾಂಗ್ರೆಸ್‌ ಪಕ್ಷದ ವಶಕ್ಕೆ ಪಡೆಯಲು ಈಗಾಗಲೇ ಸರಣಿ ಸಭೆಗಳನ್ನು ಮಾಡುತ್ತಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಪರ ಅಲೆ ಇದೆ. ಹೀಗಾಗಿ ಎರಡು ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ಬೆಳಗಾವಿ, ಚಿಕ್ಕೋಡಿ ಲೋಕಸಭಾ ಅಭ್ಯರ್ಥಿಗಳ ಅಧಿಕೃತ ಘೋಷಣೆಯಾಗಿಲ್ಲ. ಹೈಕಮಾಂಡ್‌ ಶೀಘ್ರದಲ್ಲೇ ಅಭ್ಯರ್ಥಿಗಳ ಘೋಷಣೆ ಮಾಡುತ್ತದೆ. ಈಗಾಗಲೇ ನಮ್ಮ ಸಿದ್ದತೆಗಳನ್ನು ನಾವು ಮಾಡುತ್ತಿದ್ದೇವೆ ಎಂದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಎಲ್ಲಾ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಭೆ ನಡೆಸಿದ್ದು, ಅಥಣಿಗೆ ಅಷ್ಟೇ ಹೋಗಿಲ್ಲ. ಶಾಸಕ ಲಕ್ಷ್ಮಣ ಸವದಿ ಅವರೊಂದಿಗೆ ಮಾತನಾಡಿದ್ದೇನೆ. ಅವರು ಬೆಂಗಳೂರಲ್ಲಿದ್ದು, ಬಂದ ನಂತರ ಅಥಣಿಗೂ ಹೋಗುತ್ತೇನೆಂದು ಹೇಳಿದರು.

ಇನ್ನು ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ವಿರುದ್ಧ ಗೋ ಬ್ಯಾಕ್‌ ಅಭಿಯಾನ ನಡೆಯುತ್ತಿರುವ ವಿಷಯಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿ ಪಕ್ಷದ ವಿಷಯ ನಮಗೆ ಸಂಬಧವಿಲ್ಲ. ಬಿಜೆಪಿಯವರು ಯಾರೇ ಅಭ್ಯರ್ಥಿಯನ್ನು ಹಾಕಿದರೆ ಅವರ ವಿರುದ್ಧ ಚುನಾವಣೆ ಮಾಡಿ ಗೆಲ್ಲುವುದೇ ನಮ್ಮ ಗುರಿ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!