Headlines

ಸಚಿವರೇ ಮಾತು ಕಲಿತುಕೊಳ್ಳಿ..!

ಸಂಸದೆ ಮಂಗಲಾ ಅಂಗಡಿ ಖಡಕ್ ಮಾತು
ಹೆಬ್ಬಾಳಕರ ಅವರೇ ಕ್ಷುಲ್ಲಕ ರಾಜಕೀಯ ಬಿಡಿ

ಬೆಳಗಾವಿ.
ಕಾಂಗ್ರೆಸ್ ಪಕ್ಷದ ಸಂಸ್ಕೃತಿಯಂತೆ ಕೇವಲ ಕ್ಷುಲ್ಲಕ ವಿಷಯದ ರಾಜಕಾರಣ ಮಾಡುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂಸದೆ ಮಂಗಲಾ ಅಂಗಡಿ ಕಿಡಿಕಾರಿದ್ದಾರೆ.


ಈ ಬಗ್ಗೆ ಲಿಖಿತ ಪ್ರಕಟನೆಯನ್ನು ಅವರು ನೀಡಿ ಸಚಿವರು ಬಳಸುವ ಮಾತುಗಳ ವಿರುದ್ಧ ವ್ಯಾಪಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜನರ ಮನಸಿನಲ್ಲಿ ಸಂಶಯ ಹುಟ್ಟಿಸುವ ಕ್ಷುಲ್ಲಕ ಹೇಳಿಕೆ ಕೊಡುವ ಬದಲು ಸಚಿವ ಸ್ಥಾನಕ್ಕೆ ಗೌರವ ತರುವ ಮಾತು ಆಡಬೇಕು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ,


ಅಷ್ಟಕ್ಕೂ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯಂತೆ ಕೇವಲ ಕ್ಷುಲ್ಲಕ ವಿಷಯದ ರಾಜಕಾರಣ ಮಾಡುತ್ತಿರುವ ಲಕ್ಷ್ಮಿ ಹೆಬ್ಬಾಳ್ಕರ್, ಇನ್ನು ಮುಂದಾದರೂ ರಾಷ್ಟ್ರದ ಅಭಿವೃದ್ಧಿ, ರಾಷ್ಟ್ರೀಯತೆ, ಕರ್ನಾಟಕದ ಅಭಿವೃದ್ಧಿ ಹಾಗೂ ಬೆಳಗಾವಿ ಲೋಕ ಸಭಾ ಕ್ಷೇತ್ರದ ಜನರ ಬೇಕು ಬೇಡಿಕೆಗಳ ಬಗ್ಗೆ ಹೆಚ್ಚು ಬೆಳಕು ಚೆಲ್ಲಿದರೆ ಜನರ ಬದುಕು ಹಸನುಗೊಳಿಸುವ ಕೆಲಸ ಆದೀತು ಎಂದು ಸಲಹೆ ನೀಡಿದ್ದಾರೆ.


ಟಿಕೆಟ್ ಕಿತ್ತುಕೊಂಡಿದ್ದಾರೆ ಎಂಬಂತಹ ಕ್ಷುಲ್ಲಕ ಹೇಳಿಕೆಗಳಿಗೆ ನಾನು ಪ್ರಜ್ಞಾವಂತ ಪ್ರಜೆಯಾಗಿ ಉತ್ತರಿಸಲಾರೆ. ಪಕ್ಷ ಮೊದಲು, ಕುಟುಂಬ ನಂತರ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ. ನಮ್ಮ ಕುಟುಂಬ ಯಾವತ್ತೂ ಬಿಜೆಪಿ ಸಿದ್ಧಾಂತ ನಂಬಿ ರಾಜಕೀಯ ಮಾಡಿದೆ. ಸುರೇಶ್ ಅಂಗಡಿಯವರು ಸಹ ಬದುಕಿನುದ್ದಕ್ಕೂ ಬಿಜೆಪಿ ತತ್ವದಂತೆ ಬದುಕಿದ ಧೀಮಂತ ರಾಜಕಾರಣಿ ಆಗಿದ್ದರು. ಅವರ ನಂತರ ಪಕ್ಷ ನನಗೆ ಅವಕಾಶ ಕೊಟ್ಟಿತ್ತು. ಈ ಬಾರಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದಾಗಿ ವರಿಷ್ಠರು ಹೇಳಿದ ತಕ್ಷಣ ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತಳಾಗಿ ಸಂತೋಷದಿಂದ ಒಪ್ಪಿಕೊಂಡೆ ಎಂದು ಅವರು ಹೇಳಿದ್ದಾರೆ,
ಅವರೆಲ್ಲ ಹಿರಿಯರಲ್ಲವೇ?


ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಿಲ್ಲೆಯ ಹಿರಿಯ ರಾಜಕಾರಣಿಗಳನ್ನು ಬದಿಗೊತ್ತಿ ಎರಡನೇ ಸಲ ಶಾಸಕಿ ಆಗುತ್ತಲೇ ಸಚಿವೆಯೂ ಆಗಿದ್ದಾರೆ
ಆದರೆ ಜಿಲ್ಲೆಯಲ್ಲಿ ಅವರಿಗಿಂತ ಹಿರಿಯರಾದ ಮಹಾಂತೇಶ್ ಕೌಜಲಗಿ, ಅಶೋಕ್ ಪಟ್ಟಣ ಅವರಿಂದ ಸಚಿವ ಸ್ಥಾನ ಕಿತ್ತುಕೊಂಡವರು ನೀವು ಎಂದು ಸಂಸದೆ ಮಂಗಲಾ ಅಂಗಡಿ ಜರಿದಿದ್ದಾರೆ,


ಆದರೆ ಈ ವಿಷಯವನ್ನು ಈವರೆಗೆ ನಾವು ಪ್ರಸ್ತಾಪ ಮಾಡಿರಲಿಲ್ಲ. ಜಿಲ್ಲೆಯ ಜನರಿಗೆ ಈ ವಿಷಯ ಚೆನ್ನಾಗಿದೆ ಗೊತ್ತಿದೆ. ಆದ್ದರಿಂದ ಇನ್ನು ಮುಂದೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವೈಯಕ್ತಿಕ ವಿಚಾರ ಬಿಟ್ಟು ಸಮಷ್ಟಿ ಪ್ರಜ್ಞೆ ಯಿಂದ ರಾಜಕೀಯ ಮಾಡುವುದನ್ನು ರೂಡಿ ಮಾಡಿಕೊಳ್ಳುವುದು ಒಳಿತು ಎಂದು ಸಲಹೆ ನೀಡಿದ್ದಾರೆ,

Leave a Reply

Your email address will not be published. Required fields are marked *

error: Content is protected !!