ಬೆಳಗಾವಿ:
ಶ್ರೀರಾಮ ನವಮಿಯಂದೇ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಮತ್ತೊಮ್ಮೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು,.

ಇಲ್ಲಿನ ಸಮಾದೇವಿ ಗಲ್ಲಿಯಿಂದ ಮೆರವಣಿಗೆಯಲ್ಲಿ ಬಂದ ಶೆಟ್ಟರ್ ಅವರು ತಮ್ಮ ನಾಮಪತ್ರ ಸಲ್ಲಿಸಿದರು,
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ, ದುರ್ಯೋಧನ ಐಹೊಳೆ, ವಿಧಾನ ಪರಿಷತ್ ಸದಸ್ಯ ಹನಂಮತ್ ನಿರಾಣಿ. ಮಾಜಿ ಶಾಸಕರಾದ ಅನಿಲ ಬೆನಕೆ, ಮಾಜಿ ಸಚಿವ ಮುರಗೇಶ್ ನಿರಾಣಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮೊದಲಾದವರು ಸಾಥ್ ನೀಡಿದರು