ಬೆಳಗಾವಿ. ಹುಬ್ಬಳ್ಳಿ ನೇಹಾ ಹಿರೇಮಠ ಭೀಕರ ಹತ್ಯೆಯನ್ನು ಖಂಡಿಸಿ ಮಹಿಳಾ ಜಾಗ್ರತಿ ವೇದಿಕೆಯವರು ಸೋಮವಾರ ನಡೆಸುತ್ತಿರುವ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಬೆಳಗಾವಿ ಮಾರುತಿ ಗಲ್ಲಿಯ ಮಾರುತಿ ಮಂದಿರದಿಂದ ಬೆಳಿಗ್ಗೆ 1೦.3೦ ಕ್ಕೆ ಪ್ರತಿಭಟನಾ ಮೆರವಣಿಗೆ ಹೊರಡಲಿದೆ. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಅರ್ಪಿಸಲಿದೆ.

ಈ ಪ್ರತಿಭಟನೆಗೆ ಎಲ್ಲ ಸಮಾಜದವರು ಬೆಂಬಲ ಸೂಚಿಸಿದ್ದಾರೆ. ಬಿಜೆಪಿ ಸಹ ತನ್ನ ಬೆಂಬಲ ವ್ಯಕ್ತಪಡಿಸಿದೆ.
