Headlines

ಚಿಕ್ಕಲದಿನಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಬೆಳಗಾವಿ: ಕಾಂಗ್ರೆಸ್ ಪಕ್ಷದ ಸಿದ್ದಾಂತ, ಅಭಿವೃದ್ಧಿಯನ್ನು ಮೆಚ್ಚಿ ಚಿಕ್ಕಲದಿನಿ ಗ್ರಾಮದ ಹಲವರು ಬಿಜೆಪಿ ಪಕ್ಷದ ಕಾರ್ಯಕರ್ತರು‌ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸಂತಸ ತಂದಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಚಿಕ್ಕೋಡಿ ನಗರದ ನಿವಾಸದಲ್ಲಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಚಿಕ್ಕಲದಿನಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ವೇಳೆ ಅವರು ಮಾತನಾಡಿ, ಕಾಂಗ್ರೆಸ್‌ ಪಕ್ಷ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಿಳಿಸಿ ಈ ಭಾರಿ ಚಿಕ್ಕೋಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದರು.

ರಾಜ್ಯದಲ್ಲಿ ಸತತ ಕಾಂಗ್ರೆಸ್ ಸರ್ಕಾರಗಳು ಹಲವಾರು ಅಭಿವೃದ್ಧಿ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ಪರಿಚಯಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿವೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಐದು ಭರವಸೆಗಳನ್ನು ಜಾರಿಗೊಳಿಸುವ ಮೂಲಕ ಮತದಾರರಿಗೆ ನೀಡಿದ ಭರವಸೆಯನ್ನು ಉಳಿಸಿಕೊಂಡಿದೆ. ಇದು ಸಾಮಾನ್ಯ ಜನರ ಸಬಲೀಕರಣಕ್ಕೆ ಕಾರಣವಾಗಿದೆ. ಆದ್ದರಿಂದ ಕೈ ಕಾರ್ಯಕರ್ತರು ಹಗಲಿರಳು ಶ್ರಮಿಸಿ ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿ ತುಂಬವ ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ‌ ಸೇರಿದಂತೆ ಚಿಕ್ಕಲದಿನಿ ಗ್ರಾಮದ ಯುವಕರು ಹಾಗೂ ಮುಖಂಡರು ಇದ್ದರು.

Leave a Reply

Your email address will not be published. Required fields are marked *

error: Content is protected !!