ಏಕತಾ ಫೌಂಡೇಶನ್ ಕಾರ್ಯ ಶ್ಲಾಘನೀಯ: ಸಚಿವ ಸತೀಶ್‌ ಜಾರಕಿಹೊಳಿ

ಏಕತಾ ಫೌಂಡೇಶನ್ ಕಾರ್ಯ ಶ್ಲಾಘನೀಯ: ಸಚಿವ ಸತೀಶ್‌ ಜಾರಕಿಹೊಳಿ

ನಿಪ್ಪಾಣಿ: ನಿಪ್ಪಾಣಿಯಲ್ಲಿ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಏಕತಾ ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ನಿಪ್ಪಾಣಿ ಪಟ್ಟಣದ ಕಾಮ್ಗರ್ ಚೌಕ್ ನಲ್ಲಿ ಏಕತಾ ಫೌಂಡೇಶನ್‌ ಸಹಯೋಗದಲ್ಲಿ ಆಯೋಜಿಸಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರ ಪರ ಹಮ್ಮಿಕೊಂಡಿದ್ದ ಸಾರ್ವಜನಿಕ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೊವಿಡ್‌ ಅವಧಿಯಲ್ಲಿ ಕೆಲಸ ಮಾಡಿದ ಏಕತಾ ಫೌಂಡೇಶನ್ ಸಾಮಾಜಿಕ ಕಾರ್ಯ, ಕಳಕಳಿ ಎಲ್ಲರಿಗೂ ಪ್ರೇರಣೆಯಾಗಬೇಕು. ಇಂತಹ ಫೌಂಡೇಶನ್ ಗಳ ಸಂಖ್ಯೆಯೂ ಹೆಚ್ಚಾಗಬೇಕೆಂದು ತಿಳಿಸಿದ ಅವರು, ನಾವು ಕೂಡ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ಮೂಲಕ ಸುಮಾರು ವರ್ಷಗಳಿಂದ ಸಾಮಾಜಿಕ, ಸ್ವಚ್ಛತೆ, ಶೈಕ್ಷಣಿಕ, ಕ್ರೀಡಾ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದೇವೆ. ಇದೇ ಫೌಂಡೇಶನ್‌ ನಿಂದ ಯುವಕರಿಗೆ ಪೊಲೀಸ್‌, ಆರ್ಮಿ, ಕೆಎಎಸ್‌, ಐಎಎಸ್‌, ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡುತ್ತಿದ್ದೇವೆ. ಅತೀ ಕಡಿಮೆ ಅವಧಿಯಲ್ಲಿ ತರಬೇತಿ ಪಡೆದ ಯುವಕರು ಇಂದು ಅಗ್ನಿವೀರರಾಗಿ, ಪೊಲೀಸ್‌ ಪೇದೆಯಾಗಿ ನೇಮಕವಾಗಿದ್ದಾರೆಂದು ತಿಳಿಸಿದರು.

ಜನವಿರೋಧಿ, ಜನದ್ರೋಹಿ ಹಾಗೂ ಸಂವಿಧಾನ ವಿರೋಧಿ ಬಿಜೆಪಿ ಆಡಳಿತ ವೈಫಲ್ಯದ ವಿರುದ್ಧ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯಾದ್ಯಂತ ಚುನಾವಣಾ ಜನಜಾಗೃತಿ ಆಂದೋಲನ ನಡೆಯಲಿದೆ. ಜನಸಾಮಾನ್ಯರಲ್ಲಿ ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಪರಸ್ಪರ ಒಡೆದಾಳುವ ಮೂಲಕ ದೇಶದ ನೆಲ, ಜಲ, ಸಂಪತ್ತನ್ನು ಕಾರ್ಪೊರೇಟ್ ಕಂಪನಿಗಳಿಗೆ ಲೂಟಿ ಹೊಡೆಯಲು ಮುಕ್ತ ಅವಕಾಶ ನೀಡಿರುವ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಬೇಕು. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಹೇಳಿದರು.

ಮಾಜಿ ಸಚಿವ ವೀರಕುಮಾರ ಪಾಟೀಲ್‌, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಕಾಂಗ್ರೆಸ್‌ ಮುಖಂಡರಾದ ರಾಜೇಶ್‌ ಕದಮ್‌, ಪಂಕಜ ಪಾಟೀಲ್‌, ರೋಹಣ ಸಾಳವೆ, ಮಾಜಿ ಸಚಿವ ವೀರಕುಮಾರ ಪಾಟೀಲ್, ಗಣೇಶ್ ನಿಂಬಾಳಕರ್, ರಾಜು ವಡ್ಡರ್, ಇರ್ಫಾನ್, ರಾಜಪಟಾಣ ಸಾಬ್ ಸೇರಿದಂತೆ ಏಕತಾ ಫೌಂಡೇಶನ್ ನ ಸರ್ವ ಸದಸ್ಯರು, ಅಪಾರ ಸಂಖ್ಯೆಯ ಸಾರ್ವಜನಿಕರು ಇದ್ದರು.

Leave a Reply

Your email address will not be published. Required fields are marked *

error: Content is protected !!