ಚಿಕ್ಕೋಡಿಯಲ್ಲಿ ಪ್ರಿಯಾಂಕಾಗೆ ಅಭೂತಪೂರ್ವ ಬೆಂಬಲ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಯುವ ನಾಯಕ ರಾಹುಲ ಜಾರಕಿಹೊಳಿ ಹೇಳಿದರು.ಯಮಕನಮರಡಿ ವಿಧಾನಸಭೆ ಕ್ಷೇತ್ರದಲ್ಲಿಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರವಾಗಿ ಮತಯಾಚಿಸಿದರು.ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಬದಲಾಯಿಸಿವೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇನ್ನಷ್ಟು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ರಾಹುಲ ಜಾರಕಿಹೊಳಿ ಹೇಳಿದರು….