Headlines

ಜಗದೀಶ್ ಶೆಟ್ಟರ್ ಗೆ ಆಶಿರ್ವಾದ ಮಾಡಿದ ವಿವಿಧ ಮಠಾಧೀಶರು

ಬೆಳಗಾವಿ:

ಜಗದೀಶ್ ಶೆಟ್ಟರ್ ಅವರ ತಂದೆ ಮೂರು ಸಾವಿರಮಠದ ಭಕ್ತರು. ಅವರು ಬೆಳಗಾವಿಗೆ ಬಂದ ಮೇಲೆ ಮಠಕ್ಕೆ ಬಂದಿರಲ್ಲಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಲು ಬಂದಿದ್ದೇವೆ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು.

ಶನಿವಾರ ಸಂಸದೆ ಮಂಗಲಾ ಅಂಗಡಿ ನಿವಾಸಕ್ಕೆ ಆಗಮಿಸಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟ‌ರ್ ಅವರಿಗೆ ಆಶೀರ್ವಾದ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಜಗದೀಶ್ ಶೆಟ್ಟ‌ರ್ ಅವರ ಕುಟುಂಬ ಹುಬ್ಬಳ್ಳಿಯ ಮೂರು ಸಾವಿರ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಜಗದೀಶ್ ಶೆಟ್ಟ‌ರ್ ಅವರನ್ನು ಭೇಟಿಯಾಗಿ ಆಶೀರ್ವಾದ ಮಾಡಲು ಬಂದಿದ್ದೇನೆ. ಜಗದೀಶ್ ಶೆಟ್ಟ‌ರ್ ಅವರಿಗೆ ಈ ಚುನಾವಣೆಯಲ್ಲಿ ಒಳ್ಳೆಯದಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬೈಲಹೊಂಗಲದ ಮೂರುಸಾವಿರ ಶಾಖಾ ಮಠದ ಸ್ವಾಮೀಜಿ, ಕೋರ್ತಿ ಕೋಲಾರದ ಗಾಣಿಗ ಸಮಾಜದ ಸ್ವಾಮೀಜಿ, ಅರಳಿಕಟ್ಟಿ ವೀರಕ್ತಮಠದ ಸ್ವಾಮೀಜಿ, ಘಟಪ್ರಭಾ ಹೊಸಮಠದ ಶ್ರೀಗಳು, ಬೀದರ್ ವೀರಕ್ತಮಠದ ಸ್ವಾಮೀಜಿ, ತಾರಿಹಾಳ ಅಡಿವೇಶ ಮಠದ ಸ್ವಾಮೀಜಿ, ಗೌಡಗೇರಿ ವಿರಕ್ತ ಮಠದ ಶ್ರೀಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!