ಮೋದಿ ಇಂದು ನಾಮಪತ್ರ ಸಲ್ಲಿಕೆ
ವಾರಾಣಸಿ(ಉತ್ತರಪ್ರದೇಶ): ಸತತ 3ನೇ ಬಾರಿಗೆ ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದ ಲೋಕಸಭೆ ಸ್ಪರ್ಧಿಸುತ್ತಿರುವ ಪ್ರಧಾನಿ ಮೋದಿ ಮಂಗಳವಾರ ಬೆಳಗ್ಗೆ ಗಂಗಾ ಸ್ನಾನ ಮಾಡಿ ಅಸ್ಸಿ ಘಾಟ್ನಲ್ಲಿನ ಕಾಲಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನಾ ದಿನವಾದ ಸೋಮವಾರ ವಾರಾಣಸಿ ತಲುಪಿರುವ ಮೋದಿ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಿದರು, ಬಳಿಕ ಬೃಹತ್ ರೋಡ್ ಶೋ ನಡೆಸಿದರು. ಆರು ಕಿ.ಮೀವರೆಗೂ ನಡೆದ ರೋಡ್ ಶೋನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಗಣ್ಯರು…