ಬರ ನಿರ್ವಹಣೆ; ಮಳೆಗಾಲ ಸಿದ್ಧತೆ ಕುರಿತು ಸಭೆ
ಕುಡಿಯುವ ನೀರು, ಮೇವು, ಬೀಜ-ಗೊಬ್ಬರ ಕೊರತೆ ಆಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ಬೆಳಗಾವಿ, ಮೇ 21(ಕರ್ನಾಟಕ ವಾರ್ತೆ): ಬೇಸಿಗೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಬರಗಾಲದ ಪರಿಸ್ಥಿತಿ ಇದ್ದರೂ ಈ ಬಾರಿ ಉತ್ತಮ ಮಳೆಯ ಮುನ್ಸೂಚನೆ ಇರುವುದರಿಂದ ರೈತರಿಗೆ ಸಕಾಲಕ್ಕೆ ಬೀಜ-ಗೊಬ್ಬರ ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ…