27 ರಂದು ಉಪರಾಷ್ಟ್ರಪತಿ ಬೆಳಗಾವಿಗೆ
ಬೆಳಗಾವಿಯ ಕೆಎಲ್‍ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆ್ಯಂಡ್ ರಿಸರ್ಚ್ ಕಾಹೆರ್‍ದ 14ನೇ ಘಟಿಕೋತ್ಸವವು ಇದೇ ಬರುವ ಸೋಮವಾರ 27 ಮೇ 2024ರಂದು ಮುಂಜಾನೆ 11.00 ಗಂಟೆಗೆ ಜೆಎನ್‍ಎಂಸಿ ಆವರಣದಲ್ಲಿರುವ ಕೆಎಲ್‍ಇ ಸೆಂಟಿನರಿ ಕನ್ವೇಷಣ ಸೆಂಟರದಲ್ಲಿ ಜರುಗಲಿದೆ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರು ಹೇಳಿದರು. ಭಾರತ ಸರ್ಕಾರದ ಗೌರವಾನ್ವಿತ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಇದೇ…