ವಾಹನ ಚಾಲಕರೇ ಹುಷಾರು.
ನಿಯಮ ಉಲ್ಲಂಘಿಸಿದರೆ ದಂಡ ಗ್ಯಾರಂಟಿ
ಬೆಳಗಾವಿ.
ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಅಡ್ಡಾದಿಡ್ಡಿ ಮತ್ತು ಕಾನೂನು ಬಾಹಿರವಾಗಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ

ನಗರದಲ್ಲಿ ಸಂಚಾರ ಅವ್ಯವಸೈ ಹೆಚ್ಚಾದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಆಯುಕ್ತರು ಮುಂದಾಗಿದ್ದಾರೆ.
ನಗರ ಪ್ರದೇಶ ವ್ಯಾಪ್ತಿಯಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡಚಣಿಯಾಗುವಂತಹ ಪಾದಚಾರಿ ರಸ್ತೆಗಳಲ್ಲಿ ಕಾನೂನು ಬಾಹಿರವಾಗಿ ವಾಹನ ಚಾಲನೆ, ನಿಲುಗಡೆ ಮಾಡುವಂತಹ ವಾಹನಗಳ ವಿರುದ್ಧ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಕ್ರಮಗಳನ್ನು ಕೈಕೊಳ್ಳಲಾಗುವುದು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ನಗರ ಪ್ರದೇಶದಲ್ಲಿರುವ ಎಲ್ಲ ಪಾದಚಾರಿ (ಫುಟ್ಪಾತ್) ಮಾರ್ಗಗಳನ್ನು ಮುಕ್ತವಾಗಿರಿಸಿ, ಜಾಗೃತರಾಗಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿಕೊಂಡು ಬರುವಂತೆ ಕೋರಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದಲ್ಲಿ ತಪ್ಪಿತಸ್ಥರ ವಿರುದ್ಧ ಕನರ್ಾಟಕ ಪೊಲೀಸ್ ಕಾಯ್ದೆ-1963 ರ ಕಲಂ, 92(ಜಿ); ಭಾರತೀಯ ದಂಡ ಸಂಹಿತೆ ಕಲಂ:283 ರಡಿಯಲ್ಲಿ ಕಟ್ಟುನಿಟ್ಟನ ಕ್ರಮಗಳನ್ನು ಕೈಗೊಳ್ಳಲಾಗುವುದು. ಎಂದು ಆಯುಕ್ತರು ತಿಳಿಸಿದ್ದಾರೆ.
