ಶಾಸಕ ಅಭಯ ಪಾಟೀಲ ಆರೋಪ
`ಹಣಕ್ಕಾಗಿ ರಾಜ್ಯವನ್ನು ಹರಾಜಿಗಿಟ್ಟ ಕಾಂಗ್ರೆಸ್‘
ಬೆಳಗಾವಿ.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ರಾಜ್ಯ ಸಕರ್ಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಲೀಜ್ ನೀಡುವಂತಹ ಯೋಜನೆಗಳನ್ನು ಹಾಕಿಕೊಂಡು ರಾಜ್ಯವನ್ನು ಹರಾಜಿಗಿಡಲು ಮುಂದಾಗಿದೆ ಎಂದು ಶಾಸಕ ಅಭಯ ಪಾಟೀಲ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನದ ಅನುಭವವುಳ್ಳವರು. ಆದರೂ ಕೂಡ ಈ ಬಾರಿ ಆಡಳಿತ ನಡೆಸಲು ಎಡವಿದ್ದಾರೆ ಎಂದರು.

ಈ ಹಿಂದೆ ಬಸವರಾಜ್ ಬೊಮ್ಮಾಯಿ ಸಕರ್ಾರವಿದ್ದಾಗ ಬೆಳಗಾವಿ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗೆ ಸುಮಾರು 300 ಕೋಟಿ ರೂ.ಗಳ ಟೆಂಡರ್ ಕರೆಯಲಾಗಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಲೇ ಟೆಂಡರನ್ನು ರದ್ದುಗೊಳಿಸಲಾಗಿದೆ.
ಗುತ್ತಿಗೆದಾರರು ಆರ್ಥಿಕ ಸಂಕಷ್ಟ ಅನುಭವಿಸಿ ಆತ್ಮಹತ್ಯೆಗೆ ಮುಂದಾಗುತ್ತಿದ್ದಾರೆ. ಎಲ್ಲಿ ಬಿಜೆಪಿ ಶಾಸಕರಿದ್ದಾರೋ ಅಲ್ಲಿ ಕಾಂಗ್ರೆಸ್ ಸಕರ್ಾರ ಅನುದಾನವನ್ನು ಕಡಿತಗೊಳಿಸಿದೆ ಎಂದು ಅಭಯ ಪಾಟೀಲ ದೂರಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಭಯ ಪಾಟೀಲ.
ಕಸಾಯಿಖಾನೆ ಸರ್ಕಾರ…!
ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ಮಾತನಾಡಿ, ಗ್ಯಾರಂಟಿಗಾಗಿ ಹಣ ಹೊಂದಿಸಲು ಸರ್ಕಾರ ಬೆಲೆ ಏರಿಕೆಯಂತಹ ನೀತಿಯನ್ನು ಅನುಸರಿಸುತ್ತದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಕಸಾಯಿಖಾನೆಯಂತೆ ಸಕರ್ಾರವನ್ನು ನಡೆಸುತ್ತಿದೆ. ನೋಂದಣಿ ಕ್ರಯ-ವಿಕ್ರಮ, ಅಡುಗೆ ಅನಿಲ ತೈಲ ಬೆಲೆ ಏರಿಕೆ ಮಾಡಿದೆ. ಹಿಂದಿನ ಬಿಜೆಪಿ ಸಕರ್ಾರ ಎಲ್ಲ ರೀತಿಯ ಅಭಿವೃದ್ಧಿಗೆ ನೀಡಿದ ಅನುದಾನವನ್ನು ಕೂಡ ಕಸಿದುಕೊಂಡಿದೆ. ಬೆಲೆ ಏರಿಕೆಯನ್ನು ತಕ್ಷಣವೇ ಹಿಂಪಡೆದು ರಾಜ್ಯದ ಜನರ ಹಿತ ಕಾಪಾಡದಿದ್ದರೆ ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.