ನೂತನ ಸಂಸದ ಶೆಟ್ಟರ್ ಹೇಳಿಕೆ
ಮೂಡಲಗಿ:
ದುಡ್ಡಿದ ದರ್ಪಕ್ಕೆ ಮತದಾರರು ತಕ್ಕ ಉತ್ತರ ನೀಡುವ ಮೂಲಕ ಅಭಿವೃದ್ಧಿ ಪರ ಇರುವ ಬಿಜೆಪಿ ಬೆಂಬಲಿಸಿದ್ದಾರೆಂದು ನೂತನ ಸಂಸದ ಜಗದೀಶ ಶೆಟ್ಟರ್ ಹೇಳಿದರು,
ಗುರುವಾರದಂದು ಸಂಜೆ ತಾಲೂಕಿನ ನಾಗನೂರ ಪಟ್ಟಣದ ಭಗೀರಥ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಅಭಿನಂದನೆ ಹಾಗೂ ಕಾರ್ಯಕರ್ತರ ಕೃತಜ್ಞತಾ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.

ಮತದಾರರ ಮುಂದೆ ಕಾಂಗ್ರೆಸ್ಸಿನವರು ಒಡ್ಡಿದ ಹಣ ಬಲ, ತೋಳ್ಬಲ, ಆಸೆ-ಆಮಿಷಗಳ ಆಟ ನಡೆಯಲಿಲ್ಲ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು,
ವಿರೋಧಿಗಳು ಜಿಲ್ಲೆಯ ಮತದಾರರಿಗೆ ಇನ್ನಿಲ್ಲದ ಆಮಿಷಗಳನ್ನು ಒಡ್ಡಿದರು. ದುಡ್ಡಿನ ದರ್ಪ ತೋರಿದರು, ಅಷ್ಟೇ ಅಲ್ಲ ನಮ್ಮ ವಿರುದ್ಧ ಸಾಕಷ್ಟು ಅಪಪ್ರಚಾರಗಳನ್ನು ಮಾಡಿದರು. ಆದರೆ ಪ್ರಭುದ್ಧ ಮತದಾರರ ಮಾತ್ರ ಅವರಿಗೆ ದುಡ್ಡಿನ ಅಹಂ ಇಳಿಸಿದರು ಎಂದರು,
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿಯೇ ಬಿಜೆಪಿಗೆ 50 ಸಾವಿರಕ್ಕೂ ಅಧಿಕ ಲೀಡ್ ಮತಗಳು ಬಂದಿವೆ ಎನ್ನುವುದನ್ನು ಗಮನಿಸಿದರೆ ಅವರ ಕಾರ್ಯವೈಖರಿ ಹೇಗಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಶೆಟ್ಟರ್ ವ್ಯಂಗ್ಯವಾಡಿದರು,

ನಮಗೆ ಬೇಕಾಗಿರುವುದು ದೇಶದ ಸುರಕ್ಷತೆ. ಈ ನಿಟ್ಟಿನಲ್ಲಿ ನಾವು ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ಸಂಕಲ್ಪದಿಂದ ಮತದಾರರ ಬಳಿ ಮತಯಾಚಿಸಿದ್ದಾಗಿ ಅವರು ಹೇಳಿದರು,
ಚುನಾವಣೆಯಲ್ಲಿ ಸೋತು ಸುಣ್ಣಾಗಿರುವ ಕಾಂಗ್ರೇಸ್ ಪಕ್ಷವು ಇನ್ನು ಮುಂದೆ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವದಿಲ್ಲ ಎಂದು ಭವಿಷ್ಯ ನುಡಿದರು,
ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಕಳೆದ 32 ವರ್ಷಗಳಿಂದ ನಮ್ಮ ಸಂಘಟನೆಯನ್ನು ಬಲವರ್ಧನೆ ಮಾಡಲಾಗಿದೆ. ಸಾಮಾಜಿಕ, ಶೈಕ್ಷಣಿಕ, ಸಹಕಾರ, ಧಾಮರ್ಿಕ ಹಾಗೂ ರಾಜಕೀಯ ಸೇರಿದಂತೆ ಎಲ್ಲ ರಂಗಗಳಲ್ಲಿಯೂ ನಮ್ಮ ಸಂಘಟನೆಯ ಕಾರ್ಯಕರ್ತರು ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದರು,
ಸರ್ವ ಸಮಾಜಗಳ ಸವಾರ್ಂಗೀಣ ಅಭಿವೃದ್ದಿಗೆ ಹೆಚ್ಚಿನ ಅನುದಾನಕ್ಕೆ ಪ್ರಯತ್ನಿಸಲಾಗುವುದೆಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಪ್ರಯತ್ನದಿಂದ ಅರಭಾವಿಮಠದಿಂದ ಲೋಕಾಪೂರ ವರೆಗೆ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಕಾಮಗಾರಿಗೆ ನೂತನ ಸಂಸದರು ಕೇಂದ್ರ ಸಕರ್ಾರದಿಂದ ಅನುದಾನಕ್ಕೆ ಪ್ರಯತ್ನಿಸಬೇಕು. ಅರಭಾವಿ ಕ್ಷೇತ್ರದಲ್ಲಿ ಕೇಂದ್ರೀಯ ವಿದ್ಯಾಲಯವನ್ನು ಆರಂಭಿಸಲು ಕೇಂದ್ರ ಮಟ್ಟದಲ್ಲಿ ಒತ್ತಾಯ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂಸದರಲ್ಲಿ ಕೋರಿದರು.
ದಾಖಲೆ ಮತಗಳ ಅಂತರದಿಂದ ವಿಜಯಶಾಲಿಯಾಗಿರುವ ಜಗದೀಶ ಶೆಟ್ಟರ್ ಹಾಗೂ ಗೆಲುವಿಗೆ ಕಾರಣಿಕರ್ತರಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಅರಭಾವಿ ಬಿಜೆಪಿ ಮಂಡಲದಿಂದ ಸತ್ಕರಿಸಿ ಗೌರವಿಸಲಾಯಿತು.
ಹಿರಿಯ ಸಹಕಾರಿ ಬಿ.ಆರ್.ಪಾಟೀಲ(ನಾಗನೂರ), ಯುವ ಮುಖಂಡ ಸವರ್ೋತ್ತಮ ಜಾರಕಿಹೊಳಿ, ಜಿ.ಪಂ ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಶ ಪಾಟೀಲ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಭಗೀರಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಂದ್ರು ಬೆಳಗಲಿ, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಪ್ರಕಾಶ ಕಾಳಶೆಟ್ಟಿ, ಉಪಸ್ಥಿತರಿದ್ದರು. ಪರಸಪ್ಪ ಬಬಲಿ ಸ್ವಾಗತಿಸಿದರು. ಬಸವರಾಜ ಮಾಳೇದವರ ನಿರೂಪಿಸಿದರು. ಮಹಾಂತೇಶ ಕುಡಚಿ ವಂದಿಸಿದರ