
ಶ್ರೀ ಮಹಾಲಕ್ಷ್ಮೀ ದೇವಿಯ ಮಹಾದ್ವಾರ ನಿರ್ಮಾಣಕ್ಕೆ ಭೂಮಿಪೂಜೆ
ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿಯ ಮಹಾದ್ವಾರ ನಿರ್ಮಾಣಕ್ಕೆ ಭೂಮಿಪೂಜೆ ಬೆಳಗಾವಿ: ತಾಲೂಕಿನ ಸುಕ್ಷೇತ್ರ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿಯ ಮಹಾದ್ವಾರ ನಿರ್ಮಾಣಕ್ಕೆ ಬೆಳಗಾವಿ-ಗೋಕಾಕ ರಾಜ್ಯ ಹೆದ್ದಾರಿಯ ಖನಗಾಂವ ಬಿ.ಕೆ. ಗ್ರಾಮದ ಸುಳೇಭಾವಿ ಕ್ರಾಸ್‌ನಲ್ಲಿ ಭೂಮಿಪೂಜೆ ನೆರವೇರಿಸಲಾಯಿತು. ದೇವಿಯ ದರ್ಶನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ವತಿಯಿಂದ ನಿರ್ಮಾಣವಾಗುತ್ತಿರುವ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಮಹಾದ್ವಾರ ನಿರ್ಮಾಣಕ್ಕೆ ಟ್ರಸ್ಟ್ ಅಧ್ಯಕ್ಷರು, ಸದಸ್ಯರು ಹಾಗೂ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಅರ್ಚಕರು, ಶ್ರೀ ಕಲ್ಮೇಶ್ವರ…