ಪ್ರಧಾನಿಗೆ ಪತ್ರ ಬರೆದ ರಾಜ್ಯಸಭಾ ಸದಸ್ಯ ಕಡಾಡಿ
`ವಿಮಾನ ನಿಲ್ದಾಣಕ್ಕೆ ಚನ್ನಮ್ಮನ ಹೆಸರಿಡಿ’
ಬೆಳಗಾವಿ.
ವೀರರಾಣಿ ಕಿತ್ತೂರು ಚನ್ನಮ್ಮವ ಪ್ರತಿಮೆಯನ್ನು ಬೆಳಗಾವಿ ವಿಮಾನ ನಿಲ್ದಾಣದ ಮುಂದೆ ಸ್ಥಾಪನೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮನವಿ ಮಾಡಿದ್ದಾರೆ,

ಅಷ್ಟೇ ಅಲ್ಲ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಚನ್ನಮ್ಮನ ಹೆಸರಿಡಬೇಕೆಂದು ಅವರು ಕೋರಿದ್ದಾರೆ. ಈ ಬಗ್ಗೆ ಪ್ರಧಾನಿಗೆ ಪತ್ರವನ್ನು ಅವರು ಬರೆದಿದ್ದಾರೆ.
ಹಿಂದವಿ ಸ್ವರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ 450ನೇ ಜಯಂತ್ಯೋತ್ಸವವನ್ನು ದೇಶದಾದ್ಯಂತ ಆಚರಣೆ ಮಾಡುವ ಸಂಕಲ್ಪವನ್ನು ಸಂಸದರ ಮುಂದೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದು ಸ್ವಾಗತಾರ್ಹ,

1824 ರಲ್ಲಿ ಈ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೊದಲ ಸ್ವಾತಂತ್ರ್ಯ ಕಹಳೆಯನ್ನು ವೀರರಾಣಿ ಕಿತ್ತೂರು ಚನ್ನಮ್ಮನ. ಊದಿದ್ದಾರೆ. ಹೀಗಾಗಿ 2024 ರಲ್ಲಿ 200 ವರ್ಷಗಳಾಗುತ್ತವೆ, ಈ ಸಂಗ್ರಾಮದಲ್ಲಿ ಥ್ಯಾಕರೆಯ ರುಂಡವನ್ನು ಚೆಂಡಾಡಿದ ವೀರಮಹಿಳೆಯ ಸಾಹಸಗಾಥೆಯನ್ನು ಇನ್ನಷ್ಟು ಪರಿಚಯಿಸಬೇಕಾದ ಅನಿವಾರ್ಯತೆಇದೆ,

ಈ ಹಿನ್ನೆಲೆಯಲ್ಲಿ 200 ವರ್ಷದ ಚನ್ನಮ್ಮನ ವಿಜಯೋತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕೆಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವನ್ನು ಬರೆದಿದ್ದೇನೆ ಎಂದು ರಾಜ್ಯಸಭಾ ಸದಸ್ಯ ಕಡಾಡಿ ಹೇಳಿದರು,
ಅದರ ಜೊತೆಗೆ 200 ವರ್ಷದ ಸವಿನೆನಪಿನ ಹಿನ್ನೆಲೆಯಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವೀರರಾಣಿ ಚನ್ನಮ್ಮ ಎಂದು ನಾಮಕರಣ ಮಾಡಬೇಕು, ಜೊತೆಗೆ ಅಲ್ಲಿಯೇ ಒಂದು ದೊಡ್ಡ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಮನವಿ ಮಾಡಿದ್ದಾಗಿ ಅವರು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಖುದ್ದು ಇನ್ನೊಮ್ಮೆ ಪ್ರಧಾನಿ ಮೋದಿ ಅವರನ್ನು ಖುದ್ದು ಭೆಟ್ಟಿ ಮಾಡಿ ಮನವಿ ಮಾಡಿಕೊಳ್ಳುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ