Headlines

ಡೇಂಘೀ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ- ಸಂಸದ ಕಡಾಡಿ

ಬೆಳಗಾವಿ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ತಡೆಗಟ್ಟುವಿಕೆ, ನಿಯಂತ್ರಣ ಮತ್ತು ನಿರ್ವಹಣೆಗಾಗಿ ಆರೋಗ್ಯಾಧಿಕಾರಿಗಳು ಮುನ್ನೆಚ್ಚರಿಕಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಳಗಾವಿ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಕಾರಣ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಆದರೆ ಆರೋಗ್ಯ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು ಜನರು ಕೂಡಾ ಇಲಾಖೆ ನೀಡಿದ ಸೂಚನೆಗಳನ್ನು ಪಾಲಿಸುವ ಮೂಲಕ ಡೆಂಗ್ಯೂ ಪ್ರಮಾಣದ ಸಂಖ್ಯೆಯನ್ನು ಕಡಿಮೆ ಮಾಡಬಹುದು ಜನರು ಆತಂಕಗೊಳಗಾಗುವ ಅಗತ್ಯವಿಲ್ಲ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಡೆಂಗ್ಯೂ ಪ್ರಕರಣಗಳ ಹಿನ್ನಲೆಯಲ್ಲಿ ಬಿಮ್ಸ್ ನಿರ್ದೇಶಕ ಡಾ. ಅಶೋಕ ಶೆಟ್ಟಿ, ಡಾ ಶಿಂಧೆ, ಮಲೇರಿಯಾ ರೋಗ ತಜ್ಞ ಡಾ. ಹೊನ್ನಳ್ಳಿ ಹಾಗೂ ಬೆಳಗಾವಿ ತಾಲೂಕಾ ಆರೋಗ್ಯಾಧಿಕಾರಿ ಡಾ. ರಾಜೇಶ್ವರಿ ಪಾಟೀಲ ಅವರೊಂದಿಗೆ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕೈಗೊಂಡಿರುವ ಮುಂಜಾಗ್ರತೆ ಕ್ರಮಗಳ ಕುರಿತು ಸಂಸದರ ಕಾರ್ಯಾಲಯದಲ್ಲಿ ಸಮಗ್ರ ಮಾಹಿತಿ ಪಡೆಯಲಾಯಿತು.

ಜಿಲ್ಲೆಯಲ್ಲಿ ಜೂನ್ ಒಂದೇ ತಿಂಗಳಲ್ಲಿ 68 ಕೇಸ್ ದೃಢಪಟ್ಟಿವೆ. ಇದುವರೆಗೆ ಒಟ್ಟು 177 ಡೆಂಗ್ಯೂ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿವೆ. ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ ಹೊಂದಿದವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಮತ್ತು ಎಪಿಎಲ್ ಕಾರ್ಡದಾರರಿಗೆ 300 ರೂಪಾಯಿ ನಿಗದಿ ಪಡಿಸಲಾಗಿದೆ. ಆರೋಗ್ಯ ಇಲಾಖೆಯು ಪ್ರತಿ ಶುಕ್ರವಾರಕ್ಕೊಮ್ಮೆ ಡ್ರೈ ಡೇ ಆಚರಣೆಯ ಮೂಲಕ ಜಿಲ್ಲೆಯಾದ್ಯಂತ ಸಾರ್ವಜನಿಕರಲ್ಲಿ ಫಾಗಿಂಗ್, ಸ್ವಚ್ಛತಾ ಕಾರ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದರು.

ಡೆಂಗ್ಯೂ ಪೀಡಿತ ವ್ಯಕ್ತಿಯ ರಕ್ತದಲ್ಲಿ ಪ್ಲೇಟಲೆಟ ಪ್ರಮಾಣ ಕಡಿಮೆಯಾಗುವ ಮೂಲಕ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಹೀಗಾಗಿ ತಕ್ಷಣ ವೈದ್ಯಕೀಯ ಪರಿಕ್ಷೆಗೆ ಒಳಪಟ್ಟು ಮುಂಜಾಗೃತ ಚಿಕಿತ್ಸೆ ಪಡೆಯುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದದ್ದು ಎಲ್ಲರ ಜವಾಬ್ದಾರಿಯಾಗಿದೆ. ಜಿಲ್ಲೆಯಲ್ಲಿರುವ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಡಂಗ್ಯೂ ಪ್ರಕರಣಗಳನ್ನು ಗಂಭಿರವಾಗಿ ಪರಿಗಣಿಸಿ ತಮ್ಮ ವ್ಯಾಪ್ತಿಯಲ್ಲಿ ಹತೋಟೆಗೆ ಕ್ರಮಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!