ಬೆಳಗಾವಿ.
ಪತ್ರಕರ್ತರು ಸುದ್ದಿಯ ವಾಸ್ತವ ಅಂಶವನ್ನು ಗುರುತಿಸಿ ಪ್ರಕಟಿಸುವ ಮೂಲಕ ಸಾಮಾಜಿಕ ಕಳಕಳಿ ಹೊಂದಬೇಕು ಎಂದು ಶಾಸಕ ಆಸೀಫ್ ಶೇಠ ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಂ ಯುಕ್ತಾಶ್ರಯದಲ್ಲಿ ನಡೆದ ಪತ್ರಕರ್ತರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಪತ್ರಕರ್ತರು ಸಮಾಜದ ಕನ್ನಡಿಯಿದ್ದಂತೆ. ಜನತೆಗೆ ವರದಿ ನೀಡುವ ಮೂಲಕ ಅವರಲ್ಲಿ ಒಂದು ರೀತಿಯ ಜನಾಭಿಪ್ರಾಯ ಮೂಡಿಸಬಹುದು ಎಂದರು.
ಪಾರದರ್ಶಕ ವರದಿಯ ಮೂಲಕ ಜನೆತೆಗೆ ಸತ್ಯಾಂಶವನ್ನು ತಿಳಿಸಿಕೊಡಬೇಕು. ಸತ್ಯ, ಸುಳ್ಳುಗಳನ್ನು ಪರಿಶೀಲಿಸಿ ವರದಿಗೆ ಮುಂದಾಗಬೇಕು ಎಂದು ಅವರು ತಿಳಿಸಿದರು.
ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಸರಜೂ ಕಾಟ್ಕರ್ ಅವರು ಕರ್ನಾಟಕದಲ್ಲಿ ಪತ್ರಿಕೋದ್ಯಮ ಉಗಮದ ಬಗ್ಗೆ ಮಾಹಿತಿ ನೀಡಿದರು.
ಗೋಕಾಕ್ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಮಾತನಾಡಿ, ಯಾವುದೇ ವರದಿ ಇದ್ದರೂ ಹಿಂಜರಿಯದೆ ನೇರವಾಗಿ ವರದಿಗಳನ್ನು ಮಾಡಬೇಕು ಎಂದರು.
ಡಿಸಿಪಿ ರೋಹನ್ ಜಗದೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ, ಸಂಘದ ಅಧ್ಯಕ್ಷ ದಿಲೀಪ್ ಕುರಂದವಾಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ದಿನೇಶಕುಮಾರ ಮೀನಾ ಮಾತನಾಡಿದರು.