ಪಂಚಮಸಾಲಿ ಮೀಸಲಾತಿ
`ಸಚಿವೆಗೆ 2ಎ ಮೀಸಲಾತಿ ಪತ್ರ ಚಳುವಳಿ’
ಬೆಳಗಾವಿ.
ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಕುರಿತಂತೆ ನಮ್ಮ ಬೇಡಿಕೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮನ್ನಣೆ ಸಿಗುತ್ತಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ ಸಮಾಜದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಜಿ ಅಸಮಾಧಾನ ಹೊರಹಾಕಿದರು
ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಮ್ಮುಖದಲ್ಲಿಯೇ ಈ ಅಸಮಾಧಾನ ಹೊರಹಾಕಿದ ಸ್ವಾಮಿಜಿಯವರು,
ಕಾಂಗ್ರೆಸ್ ಸರಕಾರ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಗಮನಕ್ಕೆ ತಂದಾಗ ಸರಕಾರ ಈಗ ರಚನೆಯಾಗಿದೆ. ಸ್ವಲ್ಪ ಕಾಲಾವಕಾಶ ಕೊಡಬೇಕು ಎಂದಿದ್ದರು.

ಆದರೆ ನಮಗೆ ಮನ್ನಣೆ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ನಿಪ್ಪಾಣಿಯಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಮತ್ತೆ ಹೋರಾಟ ಆರಂಭಿಸಿದ್ದೇವೆ ಎಂದು ಸ್ವಾಮೀಜಿಯವರು ಸ್ಪಷದ್ಟಪಡಿಸಿದರು,
2 ಎ ಮೀಸಲಾತಿ ನೀಡುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಸಭೆಯ ಅಧಿವೇಶನದಲ್ಲಿ ಸಮಗ್ರ ಚಚರ್ೆ ನಡೆಸಬೇಕೆಂದು ಆಗ್ರಹಿಸಿ ಕೂಡಲ ಸಂಗಮ ಪಂಚಮಸಾಲಿ ಸಮಾಜದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪತ್ರಚಳುವಳಿ ನಡೆಸಿ ಮನವಿ ಸಲ್ಲಿಸಲಾಯಿತು,.
ಕಳೆದ ಬಿಜೆಪಿ ಸರಕಾರ 2ಡಿ ಮೀಸಲಾತಿ ಕೊಟ್ಟಿತ್ತು. ಅದು ನಮಗೆ ಬೇಡ. 2 ಎ ಮೀಸಲಾತಿ ನೀಡಬೇಕೆಂದು ಹೋರಾಟ ಮತ್ತೆ ಮುಂದುವರೆಸಿದೇವು ಎಂದು ಸ್ವಾಮಿಜಿ ವಿವರಿಸಿದರು,
ಆರ್.ಕೆ.ಪಾಟೀಲ್, ಗುಂಡು ಪಾಟೀಲ್, ಶಿವಾನಂದ ತಂಬಾಕಿ, ನಂದು ಕಾರಜೋಳ, ಬಸವರಾಜ ಪಾಟೀಲ್, ಸಿದ್ದನಗೌಡ ಪಾಟೀಲ್, ಆನಂದ ಗುಡಸ, ರಾವಸಾವ್ ಪಾಟೀಲ್, ರಾಜು ಮಗದುಮ್ಮ, ಬಸವರಾಜ ಕೊಟ್ಟೂರಶೆಟ್ಟಿ, ಸುರೇಶ ಹೊಸಪೇಟ, ಶಿವಪ್ಪ ಸವದಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು