
ಶುದ್ಧ ಕುಡಿಯುವ ನೀರು ಕೊಡಿ-DC
ಶುದ್ಧ ಕುಡಿಯುವ ನೀರು ಪೂರೈಕೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ,ಅಲ್ಲಲ್ಲಿ ಕಲುಷಿತ ಕುಡಿಯುವ ನೀರಿನಿಂದಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತಿರುವುದರಿಂದ ಕುಡಿಯುವ ನೀರು ಪೂರೈಸುವ ಮುಂಚೆ ಜಲಮೂಲಗಳಿಂದ ಸ್ಯಾಂಪಲ್ ತೆಗೆದುಕೊಂಡು ಪರೀಕ್ಷಿಸಬೇಕು. ನೀರು ಕುಡಿಯಲು ಯೋಗ್ಯವಾಗಿದ್ದರೆ ಮಾತ್ರ ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ಜು.15) ಜರುಗಿದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ…