ಶಾಸಕ ಬಾಲಚಂದ್ರ ಪ್ರಶ್ನೆಗೆ ಕಂದಾಯ ಸಚಿವರ ಸ್ಪಷ್ಟನೆ
ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ ಸಚಿವರ ಲಿಖಿತ ಉತ್ತರ
ಬೆಳಗಾವಿ.
ಅರಭಾವಿಯಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಹಣಕಾಸಿನ ಕೊರತೆಯೇ ಕಾರಣ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣ ಭೈರೆಗೌಡರು ಲಿಖಿತ ಉತ್ತರ ನೀಡಿದ್ದಾರೆ.

ಆರ್ಥಿಕ ಇಲಾಖೆಯು 2022 ನೇ ಸಾಲಿನ ಆರ್ಥಿಕ ವರ್ಷದಲ್ಲಿ ತಾಲೂಕು ಆಡಳಿತ ಸೌಧ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಮುಂದಿನ ಒಂದು ವರ್ಷದವರೆಗೆ ಕೈಗೆತ್ತಿಕೊಳ್ಳಬಾರದು ಎಂದು ಸೂಚಿಸಿದ ಹಿನ್ನೆಲೆಯಲ್ಲಿ ಪ್ರಸ್ತಾವನೆಯನ್ನು ಮುಂದೂಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ಆಡಳಿತ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಸರ್ಕಾರ ಗಮನಕ್ಕೆ ಬಂದಿದೆಯೇ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶ್ನೆ ಮಾಡಿದ್ದರು.