ಬೆಳಗಾವಿ
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜಾಂಬೋಟಿ ರಸ್ತೆಯಲ್ಲಿ ಕುಸುಮಳ್ಳಿ ಸೇತುವೆ ಪರಿಶೀಲಿಸಿದರು.

ಖಾನಾಪುರ ಶಾಸಕರಾದ ವಿಠ್ಠಲ ಹಲಗೇಕರ, ಮಾಜಿ ಶಾಸಕರಾದ ಅಂಜಲಿ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮತ್ತಿತರರು ಉಪಸ್ಥಿತರಿದ್ದರು.
ಖಾನಾಪುರ ಪ್ರವಾಸಿಮಂದಿರದಲ್ಲಿ ಸಚಿವರನ್ನು ಭೇಟಿ ಮಾಡಿದ ಮಲಪ್ರಭಾ ನದಿತೀರದ ಹಿರೇಹಟ್ಟಿಹೊಳಿ ಗ್ರಾಮದ ಜನರು, ಸಂಪೂರ್ಣ ಗ್ರಾಮವೇ ಜಲಾವೃತಗೊಳ್ಳುವುದರಿಂದ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿಕೊಂಡರು.
ಪ್ರತಿವರ್ಷ ಮಳೆಗಾಲದಲ್ಲಿ ಹಿರೇಹಟ್ಟಿಹೊಳಿ ಮುಳುಗಡೆಯಾಗುವುದರಿಂದ ವೈದ್ಯಕೀಯ ಸೌಲಭ್ಯ, ಶಿಕ್ಷಣ ಮತ್ತಿತರ ಮೂಲಸೌಕರ್ಯಗಳು ಗ್ರಾಮಸ್ಥರಿಗೆ ಸಿಗುತ್ತಿಲ್ಲ; ಆದ್ದರಿಂದ ಇದಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಚಿವರಿಗೆ ಒತ್ತಾಯಿಸಿದರು.
ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.
