ಮಂಗಾಯಿ ಜಾತ್ರೆ ಸ್ಟೇಟಸ್ ಹಾಕಿದವ ವಿರುದ್ಧ ಖಾಕಿ ಗರಂ

ಬೆಳಗಾವಿ.ಕೋಮು ಸೌಹಾರ್ದತೆಗೆ ಧಕ್ಕೆ ತರುವಙತಹ ಸ್ಟೇಟಸ್ ಹಾಕಿದ್ದ ವಡ್ಡರವಾಡಿಯಅಜಯ ಶ್ಯಾಮ ಕಾಗಲಕರ (27) ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಕಳೆದ ದಿನ ಈತನು ವಡಗಾಂವಿಯಲ್ಲಿ ನಡೆಯುತ್ತಿರುವ ಶ್ರೀ ಮಂಗಾಯಿ ಜಾತ್ರೆಯಲ್ಲಿ ಬಗ್ಗೆ ಸ್ಟೇಟಸ್ ಹಾಕಿದ್ದು ಹಿಂದೂಗಳ ಬಳಿ ಮಾತ್ರ ಸಾಮಾನುಗಳನ್ನು ಖರೀದಿ ಮಾಡಬೇಕೆಂದು ಸ್ಟೇಟಸ್ ಹಾಕಿದ್ದನು. ಈ ಸ್ಟೇಟಸ್ ದಿಂದ ಹಿಂದೂ ಮತ್ತು ಮುಸ್ಲಿಂ ಸಮುದಾಯದವರ ನಡುವೆ ವೈಮನಸ್ಸು ಬೆಳೆದು ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾದ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.

Read More

ಜೀವಹಾನಿ ಆಗದಂತೆ ಮುನ್ನೆಚ್ಚರಿಕೆಗೆ ಸೂಚನೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಸಭೆ ಪ್ರವಾಹದಿಂದ ಜೀವಹಾನಿ ಆಗದಂತೆ ಮುನ್ನೆಚ್ಚರಿಕೆಗೆ ಸೂಚನೆ ಬೆಳಗಾವಿ, ಜಿಲ್ಲೆಯ ಪ್ರತಿಯೊಬ್ಬ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿರುವ ಕಾಳಜಿ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು; ಯಾವುದೇ ಕಾರಣಕ್ಕೂ ಜನರು ಮತ್ತು‌ ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪ್ರವಾಹ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ‌…

Read More
error: Content is protected !!