
ಭೂಸ್ವಾಧೀನ ಪ್ರಕ್ರಿಯೆ ಬೇಗ ಮುಗಿಸಿ
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮತ್ತು ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಂಸದರಾದ ಜಗದೀಶ ಶೆಟ್ಟರ ಬೆಳಗಾವಿ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಗಾವಿ ನಗರದ ಸುತ್ತಲಿನಲ್ಲಿ ರಿಂಗ್ ರೋಡ್ ಅಭಿವೃದ್ಧಿ ಕಾಮಗಾರಿಯ ಭೂ ಸ್ವಾದೀನ ಪ್ರಕ್ರಿಯೆಯನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ – ಹುನಗುಂದ – ರಾಯಚೂರು ಮಾರ್ಗದ ರಸ್ತೆ ನಿರ್ಮಾಣದ ಕುರಿತು ಹಾಗೂ ನೈರುತ್ಯ ರೈಲ್ವೆ ವಲಯಕ್ಕೆ ಸಂಬಂಧಿಸಿದಂತೆ ಬೆಳಗಾವಿ – ಕಿತ್ತೂರು – ಧಾರವಾಡ ನೂತನ ರೈಲ್ವೆ ನಿರ್ಮಾಣ…