
ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮಹಿಳೆಯರ ದಾರುಣ ಸಾವು
ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮಹಿಳೆಯರ ದಾರುಣ ಸಾವು ದೇವಸ್ಥಾನ ಸ್ವಚ್ಛಗೊಳಿಸಿ ವಾಪಸ್ ಬರುವಾಗ ವಿದ್ಯುತ್ ಸ್ಪರ್ಶ ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ ವಿದ್ಯುತ್ ತಗುಲಿ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಸುಳೇಭಾವಿ ಗ್ರಾಮದ ಸವಿತಾ ಫಕೀರಪ್ಪ ಒಂಟಿ(34) ಹಾಗೂ ಕಲಾವತಿ ಮಾರುತಿ ಬಿದರವಾಡಿ(41) ಎಂಬ ಮಹಿಳೆಯರು ಮೃತಪಟ್ಟಿದ್ದಾರೆ. ದೇವಸ್ಥಾನದಲ್ಲಿ ಮಹಿಳಾ ಸಂಘದ ವಾರದ ಸಭೆ ನಡೆಸಿದ ಬಳಿಕ ದೇವಸ್ಥಾನವನ್ನು ಎಲ್ಲ ಮಹಿಳೆಯರು ಸ್ವಚ್ಛಗೊಳಿಸಿದ್ದರು. ದೇವಸ್ಥಾನವನ್ನು ನೀರಿನಿಂದ…