Headlines

ತ್ವರಿತ ಪರಿಹಾರಕ್ಕೆ ಸಿಎಂಗೆ ಬಾಲಚಂದ್ರ‌ ಮನವಿ

ಸಿಎಂಗೆ ಬಾಲಚಂದ್ರ ಜಾರಕಿಹೊ:ಳಿ ಮನವಿ
`ಪರಿಹಾರ ಕಾರ್ಯ ತ್ವರಿತವಾಗಿ ಕೈಗೊಳ್ಳಿ’

ಗೋಕಾಕ:
ಪ್ರವಾಹದಿಂದ ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು..
ಸೋಮವಾರದಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದಾರಾಮಯ್ಯನವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇತ್ತಿಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಕ್ಷೇತ್ರದ ಸುಮಾರು 30 ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ವಿವರಿಸಿದರು.


ಘಟಪ್ರಭಾ ನದಿಗೆ ಬಂದ ಭಾರಿ ಪ್ರವಾಹದಿಂದ ನಮ್ಮ ಕ್ಷೇತ್ರದ ನದಿ ತೀರದ ಲೋಳಸೂರು, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ, ಬೀರನಗಡ್ಡಿ, ಹುಣಶ್ಯಾಳ ಪಿ.ಜಿ. ವಡೇರಹಟ್ಟಿ, ಫುಲಗಡ್ಡಿ, ಮುಸಗುಪ್ಪಿ, ಧರ್ಮಟ್ಟಿ, ಪಟಗುಂದಿ, ಕಮಲದಿನ್ನಿ, ರಂಗಾಪೂರ, ಮುನ್ಯಾಳ, ಅಡಿಬಟ್ಟಿ, ಚಿಗಡೊಳ್ಳಿ, ಮೆಳವಂಕಿ, ಕಲಾರಕೊಪ್ಪ, ಹಡಗಿನಾಳ, ಉದಗಟ್ಟಿ, ತಳಕಟ್ನಾಳ, ತಿಗಡಿ, ಸುಣಧೋಳಿ, ಬೈರನಟ್ಟಿ, ಹುಣಶ್ಯಾಳ ಪಿ.ವಾಯ್. ಬೀಸನಕೊಪ್ಪ, ಢವಳೇಶ್ವರ, ಅರಳಿಮಟ್ಟಿ, ಅವರಾದಿ, ಗ್ರಾಮಗಳಲ್ಲಿ ಭಾಗಶ: ಹಾಗೂ ಕೆಲವೊಂದು ಗ್ರಾಮಗಳು ಜಲಾವೃತಗೊಂಡಿವೆ. ಇದರಿಂದ ಸಾರ್ವಜನಿಕರು ಮತ್ತು ರೈತರಿಗೆ ತುಂಬಾ ಹಾನಿಯಾಗಿದೆ ಎಂದು ಅವರು ವಿವರಿಸಿದರು.
ಪ್ರವಾಹ ಪೀಡಿತ ಗ್ರಾಮಗಳ ರೈತರ ಜಮೀನುಗಳ ಬೆಳೆಗಳು ಪ್ರವಾಹದಿಂದ ಭಾರಿ ಪ್ರಮಾಣದಲ್ಲಿ ಹಾನಿಯಾಗಿವೆ. ಕೂಡಲೇ ಬೆಳೆಗಳ ಹಾನಿ ಬಗ್ಗೆ ಸಮೀಕ್ಷೆ ಮಾಡಿಸಿ ರೈತರಿಗೆ ಬೆಳೆ ಪರಿಹಾರ ನೀಡಬೇಕು. ಪ್ರವಾಹ ಪೀಡಿತ ಗ್ರಾಮಗಳಲ್ಲಿ ವಾಸಿಸುವ ಸಾರ್ವಜನಿಕರ ಮನೆಗಳಿಗೆ ನೀರು ನುಗ್ಗಿದ್ದರಿಂದ ಮನೆಗಳನ್ನು ಬಿಟ್ಟು ಕಾಳಜಿ ಕೇಂದ್ರಗಳಿಗೆ ಹೋದ ಕುಟುಂಬಗಳಿಗೆ ಕೂಡಲೇ ಪರಿಹಾರ ನೀಡಬೇಕು.


ನಿರಂತರ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರ ಕುಟುಂಬಗಳ ಮನೆಗಳ ನಿಮರ್ಾಣಕ್ಕೆ ಪರಿಹಾರ ನೀಡಬೇಕು. ಪ್ರತಿ ವರ್ಷವೂ ಘಟಪ್ರಭಾ ನದಿಗೆ ಪ್ರವಾಹ ಬರುತ್ತಿರುವುದರಿಂದ ನದಿ ತೀರದ ಗ್ರಾಮಗಳ ಸ್ಥಳಾಂತರಕ್ಕೆ ಸಕರ್ಾರವು ನಿವೇಶನ ಗುರುತಿಸಿ ಅವರುಗಳಿಗೆ ಶಾಶ್ವತ ಪರಿಹಾರವನ್ನು ಕಲ್ಪಿಸಿಕೊಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ರಾಜ್ಯ ಸಕರ್ಾರದ ಮುಖ್ಯ ಕಾರ್ಯದಶರ್ಿ ಡಾ. ಶಾಲಿನಿ ರಜನೀಶ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!