
ಮಹಿಳೆಯರಿಗಾಗಿ ಸಂಜೀವಿನಿ ಯೋಜನೆ ಜಾರಿ- ಬಾಲಚಂದ್ರ
ಗೋಕಾಕ.ಆರ್ಥಿಕವಾಗಿ ಹಿಂದುಳಿದ ಮತ್ತು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ರವಿವಾರ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 14.38 ಲಕ್ಷ ರೂಪಾಯಿಗಳ ಚೆಕ್ ಗಳನ್ನು ವಿವಿಧ ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡಿದರು. ಮಹಿಳಾ ಸಮುದಾಯದವರು ಸಹ ಮುಖ್ಯವಾಹಿನಿಗೆ ಬರಬೇಕು. ಆರ್ಥಿಕವಾಗಿಯೂ ಸಬಲರಾಗಬೇಕೆನ್ನುವ ಉದ್ದೇಶದಿಂದ ಕಹಾಮ ಹಾಗೂ…