Headlines

ಬಾಂಗ್ಲಾ ಮುಸ್ಲೀಂರ ವಿರುದ್ಧ VHP ಪ್ರತಿಭಟನೆ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ತಡೆಯಿರಿ; ಬೆಳಗಾವಿಯಲ್ಲಿ ಪ್ರತಿಭಟಿಸಿದ ವಿಶ್ವ ಹಿಂದೂ ಪರಿಷತ್ – ಬಜರಂಗ ದಳ

ಬೆಳಗಾವಿ

ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಪಕ್ಷಾತೀತವಾಗಿ ವಿಶ್ವಮಟ್ಟದಲ್ಲಿ ಧ್ವನಿ ಎತ್ತಬೇಕೆಂದು ಒತ್ತಾಯಿಸಿ ಇಂದು ಬೆಳಗಾವಿಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸೋಮವಾರದಂದು ಬೆಳಗಾವಿಯಲ್ಲಿ ರಾಣಿ ಚೆನಮ್ಮ ವೃತ್ತದಿಂದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಪ್ರತಿಭಟನಾಕಾರರು ಬಾಂಗ್ಲಾ ದೇಶದಲ್ಲಿರುವ ಹಿಂದೂಗಳ ಮೇಲೆ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿ ಹಿಂದೂಗಳನ್ನು ಕುಗ್ಗಿಸುವ ತಂತ್ರಗಾರಿಕೆ ನಡೆದಿದೆ. ಶೇ 32 ರಷ್ಟಿದ್ದ ಹಿಂದೂಗಳ ಸಂಖ್ಯೆ ಈಗ ಶೇ 8 ಕ್ಕೆ ಇಳಿದಿದೆ. ಹಿಂದೂ ಮುಸ್ಲಿಂ ಭಾಯಿ-ಭಾಯಿ ಎನ್ನುವವರು ಈಗ ಧ್ವನಿ ಎತ್ತಿ ಪ್ರತಿಭಟಿಸಬೇಕು. ಪಿಎಂ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. ಪಿಎಂ ಮೋದಿ ಅವರು ವಿಶ್ವ ಸಂಸ್ಥೆಯ ಎಲ್ಲ ರಾಷ್ಟ್ರಗಳ ಸಹಾಯಪಡೆದು ಒತ್ತಡ ತಂದು ಶಾಂತಿ ನೆಲೆಸುವಂತೆ ಮಾಡಬೇಕೆಂದು ಒತ್ತಾಯಿಸಿದರು.

ಇನ್ನು ವಿಶ್ವ ಹಿಂದೂ ಪರಿಷತನ ಜಿಲ್ಲಾಧ್ಯಕ್ಷರಾದ ಪ್ರಮೋದಕುಮಾರ ವಕ್ಕುಂದಮಠ ಅಲ್ಪಸಂಖ್ಯಾತರ ಮೇಲೆ ಅನ್ಯಾಯವಾದರೇ ತಕ್ಷಣ ಧ್ವನಿ ಎತ್ತಲಾಗುತ್ತದೆ. ಆದರೇ ಬಾಂಗ್ಲಾ ದೇಶದಲ್ಲಿರುವ ಅಲ್ಪಸಂಖ್ಯಾತರ ಮೇಲೆ ಇಷ್ಟು ಘೋರ ಅನ್ಯಾಯವಾದರೂ ನಮ್ಮ ದೇಶದಲ್ಲಿ ಧ್ವನಿ ಎತ್ತದಿರುವುದು ದುರ್ದೈವದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ಪಿಎಂ ಮೋದಿ ಅವರು ಕೂಡಲೇ ಮಧ್ಯಸ್ಥಿಕೆಯನ್ನು ವಹಿಸಿ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಅನ್ಯಾಯವನ್ನು ಸರಿಪಡಿಸಲು ಕ್ರಮಕೈಗೊಳ್ಳಬೇಕೆಂದರು.

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಭಾವಕಣ್ಣಾ ಲೋಹಾರ ಅವರು ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರು ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಧ್ವನಿ ಎತ್ತಬೇಕು. ಅವರಿಗೆ ಸಂಕ್ಷಣೆ ನೀಡಿ ಭಾರತಕ್ಕೆ ಕರೆಯಿಸಿಕೊಳ್ಳುವ ವ್ಯವಸ್ಥೆಯಾಗಬೇಕೆಂದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದ ದಳದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!