ಸಾಲಗಾರರ ಕಿರುಕುಳ ತಪ್ಪಿಸಲು ಸ್ವ ಸಹಾಯ ಸಂಘದ ಮಹಿಳೆಯರ ಮನವಿ
ಫೈನಾನ್ಸ್ ನಿಂದ ಸಾಲ ಪಡೆದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಸಾಲಗಾರರು ನೀಡುತ್ತಿರುವ ಕಿರುಕುಳ ತಪ್ಪಿಸ ಬೇಕೆಂದು ಜಿಲ್ಲಾಧಿಕಾರಿ ಗಳಿಗೆ ಮಹಿಳೆಯರು ಮನವಿ ಸಲ್ಲಿಸಿದರು.
ಬೆಳಗಾವಿ ಜಿಲ್ಲಾಧಿಕಾರಿ ಆವರಣದಲ್ಲಿ ಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಸ್ವ ಸಹಾಯ ಸಂಘದ ಮಹಿಳೆಯರು ಫೈನಾನ್ಸ್ ವರು ಕಿರುಕುಳ ಕೊಡುತ್ತೀದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು .

ಫೈನಾನ್ಸ್ ನವರು ಸ್ವ ಸಹಾಯ ಸಂಘಗಳಿಗೆ ನೀಡಿದ ಸಾಲದ ವಸೂಲಿ ನೆಪದಲ್ಲಿ ವಿನಾಕಾರಣ ತೊಂದರೆ ಕೊಡುತ್ತಿದ್ದಾರೆ. ಸಾಲ ಮರುಪಾವತಿ ಮಾಡಲಾಗದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು..