ತ್ವರಿತ ಪರಿಹಾರಕ್ಕೆ ಸಿಎಂಗೆ ಬಾಲಚಂದ್ರ ಮನವಿ
ಸಿಎಂಗೆ ಬಾಲಚಂದ್ರ ಜಾರಕಿಹೊ:ಳಿ ಮನವಿ`ಪರಿಹಾರ ಕಾರ್ಯ ತ್ವರಿತವಾಗಿ ಕೈಗೊಳ್ಳಿ’ಗೋಕಾಕ:ಪ್ರವಾಹದಿಂದ ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು..ಸೋಮವಾರದಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದಾರಾಮಯ್ಯನವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇತ್ತಿಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಕ್ಷೇತ್ರದ ಸುಮಾರು 30 ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ…