ಮದ್ಯದಂಗಡಿ ಬೇಡ.. ನಾರಿಯರ ಪ್ರತಿಭಟನೆ
ಮದ್ಯದ ಮಳಿಗೆ ಸ್ಥಳಾಂತರಕ್ಕೆ ಒತ್ತಾಯಿಸಿ ಕಿತ್ತೂರಿನ ಮಹಿಳೆಯರ ಪ್ರತಿಭಟನೆಬೆಳಗಾವಿ: ಕಿತ್ತೂರಿನ ಸೋಮವಾರ ಪೇಟೆಯ ಬೆಲ್ಲದ ಓಣಿಯಲ್ಲಿರುವ ಎಂಎಸ್ ಐಎಲ್ ಮದ್ಯದ ಮಳಿಗೆಯನ್ನು ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಕಿತ್ತೂರಿನ ಮಹಿಳೆಯರು ನಗರದ ಅಬಕಾರಿ ಇಲಾಖೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನ ಸೋಮವಾರ ಪೇಟೆಯ ಬೆಲ್ಲದ ಓಣಿಯಲ್ಲಿರುವ ಮದ್ಯದ ಮಳಿಗೆಯ ಎದುರು ಮಹಿಳೆಯರು, ವೃದ್ಧರು ಹಾಗೂ ಮಕ್ಕಳು ಸಂಚರಿಸುವ ಪ್ರಮುಖ ರಸ್ತೆಯಾಗಿದ್ದು, ಈ ಮಳಿಗೆಯಿಂದ ಕಿರಿಕಿರಿಯಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಕಳೆದ 14 ವರ್ಷಗಳಿಂದ ಕುಡುಕರ ಹಾವಳಿ ಹೆಚ್ಚಾಗಿದೆ….