ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತರ ಪ್ರತಿಭಟನೆ
ಬೆಳಗಾವಿ:
ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ಖಾಸಗಿ ಎಪಿಎಂಸಿ ಬಂದ್ ಮಾಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಮತ್ತು ಹಸಿರು ರೈತ ಸಂಘದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು

ಇಲ್ಲಿನ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ ನಡೆಸಿದ ರೈತರು, ಬೆಳೆನಷ್ಟ, ಬೆಳೆವಿಮೆ ಪರಿಹಾರ ವಿತರಣೆ ವಿಳಂಬ ಮತ್ತು ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಖಾಸಗಿ ಎಪಿಎಂಸಿ ಬಂದ್ ಮಾಡುವಂತೆ ಆಗ್ರಹಿಸಿದರು.

ಅಲ್ಲದೇ, ಹುಕ್ಕೇರಿ ತಾಲೂಕಿನ ಸಂಕೇಶ್ವರದ ಖಾಸಗಿ ಎಪಿಎಂಸಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಿದ್ದು, ವರ್ಷಕ್ಕೆ 10 ಕೋಟಿಯಷ್ಟು ಆದಾಯವನ್ನು ದಲ್ಲಾಳಿಗಳೇ ಪಡೆಯುತ್ತಿದ್ದಾರೆ. ಹೀಗಾಗಿ, ಸರ್ಕಾರ ಕೊಡಲೇ ಸಂಕೇಶ್ವರ ಪಟ್ಟಣದ ಖಾಸಗಿ ಎಪಿಎಂಸಿ ಬಂದ್ ಮಾಡಬೇಕೆಂದು ಒತ್ತಾಯಿಸಿದರು.
ಹಸಿರು ಮತ್ತು ರಾಜ್ಯ ರೈತ ಸಂಘದ ಕಾರ್ಯಕರ್ತರು, ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು