ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್.
ಯಮಕನಮರಡಿ ಠಾಣೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಸಿಪಿಐ ಜಾವೇದ ಮುಷಾಪುರಿ
ಬೆಳಗಾವಿ ಮಾಳಮಾರುತಿ ಠಾಣೆಯಲ್ಲಿ ಗಣೇಶ ಮೂರ್ತಿಯನ್ನು ಮೆರವಣಿಗೆಯ ಮೂಲಕ ತಂದು ಪ್ರತಿಷ್ಠಾಪಿಸಿದ ಜೆ..ಎಂ. ಕಾಲಿಮಿರ್ಚಿ
ಬೆಳಗಾವಿ,.
ಗಡಿನಾಡ ಬೆಳಗಾವಿ ಜಿಲ್ಲೆಯಲ್ಲಿ ಈ ಮೂವರು ಅಧಿಕಾರಿಗಳು ಗಣೇಶ ಮೂರ್ತಿಯನ್ನು ಭಕ್ತಿಪೂರ್ವಕವಾಗಿ ಪ್ರತಿಷ್ಠಾಪಿಸಿದ್ದನ್ನು ಗಮನುಸಿದರೆ ಇದು ಭಾವೈಕ್ಯತೆಯ ನಾಡು ಎಂದು ಹೇಳಬಹುದು.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ , ಯಮಕನಮರಡಿ ಸಿಪಿಐ ಜಾವೇದ ಮುಷಾಪುರಿ ಮತ್ತು ಬೆಳಗಾವಿ ಮಾಳಮಾರುತಿ ಠಾಣೆಯ ಸಿಪಿಐ ಜೆ.ಎಂ. ಕಾಲಿಮಿರ್ಚಿ ಅವರು ಭಕ್ತಿಪೂರ್ವಕವಾಗಿ ವಿಘ್ನನಿವಾರಕ ಗಣೇಶನನ್ನು ಪ್ರತಿಷ್ಠಾಪಿಸಿ ಉಳುದವರಿಗೆ ಮಾದರಿ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಬೆಳಗಾವಿ ಹಿರಿಮೆಯನ್ನು ಮತ್ತಷ್ಟು ಹೆಚ್ಚಳ ಮಾಡಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಇರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು.
ನಂತರ ಪ್ರತಿವರ್ಷದಂತೆ ಕಚೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಕುಟುಂಬ ಸಮೇತ ಪೂಜೆಯನ್ನು ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಪತ್ನಿ ಅಂಕಿತಾ, ಪುತ್ರ ಹಾಗೂ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

ಯಮಕನಮರಡಿ ಠಾಣೆಯಲ್ಲಿ ಸಿಪಿಐ ಜಾವೇದ್ ಅವರು ಗ್ರಾಮದ ಪ್ರಮುಖರು ಮತ್ತು ಸಿಬ್ಬಂದಿಗಳ ಜೊತೆ ಸೇರಿ ಭಕ್ತಿ ಪೂರ್ವಕವಾಗಿ ಗಣೇಶನನ್ನು ಪ್ರತಿಷ್ಠಾಪಿಸಿದರು.
ಬೆಳಗಾವಿ ಮಾಳಮಾರುತಿ ಠಾಣೆಯ ಸಿಪಿಐ ಕಾಲಿಮಿರ್ಚಿ ಅವರು ತೆರೆದ ವಾಹನದಲ್ಲಿ ಗಣೇಶನನ್ನು ಸಡಗರ ಸಂಭ್ರಮದಿಂದ ತಂದು ಪ್ರತಿಷ್ಠಾಪಿಸಿದರು.
