
ವಿಶ್ವ ದಾಖಲೆ ಬರೆದ ಪ್ರಜಾಪ್ರಭುತ್ವ ದಿನಾಚರಣೆ
ಬೆಂಗಳೂರು, ಸೆ. 15 (ಕರ್ನಾಟಕ ವಾರ್ತೆ): ದೇಶದ ಪ್ರಮುಖ ಹಬ್ಬವೆಂದೇ ಭಾವಿಸಲಾಗಿದ್ದು, ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯನ್ನು ಭಾನುವಾರ ರಾಜ್ಯಾದ್ಯಂತ ಅರ್ಥಪೂರ್ಣ ಹಾಗೂ ಬಹಳ ಯಶಸ್ವಿಯಾಗಿ ಆಚರಣೆಯಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಶೇಷ ವಿನ್ಯಾಸದ ಹಾಗೂ ವಿಭಿನ್ನ ಸಂದೇಶಗಳನ್ನು ಸಾರುವ ಉಡುಗೆ-ತೊಡುಗೆ, ವೇಷಭೂಷಣ ಹಾಗೂ ಕಲಾ ಪ್ರಾಕಾರಗಳ ಬಳಕೆ ಮಾಡಿ ಪ್ರಜಾಪ್ರಭುತ್ವದ ಮಹತ್ವ ಸಾರಿದರು.ಜಿಲ್ಲಾಡಳಿತದ ನೇತೃತ್ವದಲ್ಲಿ ಎಲ್ಲಾ ಇಲಾಖೆಗಳ ನೌಕರರು ಹಾಗೂ ಸಾವಿರಾರು ಸೇವಾ ಸಂಸ್ಥೆಗಳು, ಸ್ವಯಂ ಸೇವಕರು ಹಾಗೂ ಎಲ್ಲಾ ಶಾಲಾ, ಕಾಲೇಜುಗಳ ಮಕ್ಕಳು ಕೈ ಹಿಡಿದು…