ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದ್ದು, ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿಯಿಂದಾಗಿ ರಾಜ್ಯದಲ್ಲಿ ಕೋಮುಗಲಭೆಗಳು ಆಗುತ್ತಿವೆ ಎಂದು ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು . ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಲ್ಪಸಂಖ್ಯಾತರ ತುಷ್ಠಿಕರಣ ದಿಂದಲೇ ಪ್ಯಾಲೆಸ್ಟೇನ ಧ್ವಜ ಹಾಗೂ ಪಾಕಿಸ್ತಾನ ಧ್ವಜ ಹಾರಿಸುತ್ತಾರೆ. ಅಲ್ಪಸಂಖ್ಯಾತರ ತುಷ್ಟಿಕರಣದ ನೀತಿಯಿಂದಲೇ ಈ ರೀತಿಯ ಘಟನೆ ಆಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗಣೇಶ ವಿಸರ್ಜನೆ ವೇಳೆ ದಾವಣಗೆರೆ ಹಾಗೂ ನಾಗಮಂಗಲದ ಗಲಭೆಗೆ ಪ್ರಚೋದನೆ ಕೊಟ್ಟವರು, ಕಲ್ಲು ಹೊಡೆದವರ ರಕ್ಷಣೆ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗ ಇಂತಹ ಘಟನೆಗಳು ಸಾಮಾನ್ಯ. ವಿರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗದ ವೇಳೆಯೂ ರಾಮನಗರ, ದಾವಣಗೆರೆಯಲ್ಲಿ ಗಲಾಟೆ ಸಂಭವಿಸಿವೆ ಎಂದು ಹೇಳಿದರು.
ತಿರುಪತಿ ಲಡ್ಡು: ತನಿಖೆಗೆ ಒತ್ತಾಯ…. ತಿರುಪತಿ ಲಡ್ಡುವಿನಲ್ಲಿ ಪ್ರಾಣಿಯ ಮಾಂಸ ಪತ್ತೆಯಾಗಿದೆ ಎಂಬ ಅಲ್ಲಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಗಂಭೀರ ವಾಗಿದೆ. ಹಿಂದಿನ ಮುಖ್ಯಮಂತ್ರಿ ಜಗನ್ ಮೋಹನರೆಡ್ಡಿ ಕ್ರೈಸ್ತ್ ಧರ್ಮಕ್ಕೆ ಮತಾಂತರಗೊಂಡವರು. ಹಿಂದೂ ಧರ್ಮದವರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಆಗಿದ್ದರೂ ಆಗಿರಬಹುದು. ಈ ಸಂಪೂರ್ಣ ತನಿಖೆಯಾಗಿಬೇಕು. ಅಲ್ಲದೇ ಆರೋಪ ಸಾಬೀತಾದರೆ ಕಠಿಣ ಶಿಕ್ಷೆಯಾಗಬೇಕು ಎಂದು ಜಗದೀಶ ಶೆಟ್ಟರ್ ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರ ದಿಂದ ದ್ವೇಷದ ರಾಜಕಾರಣ ಹೆಚ್ಚಿದೆ. ಮುಡಾ ಹಗರಣ ಹೊರಗೆ ಬೀಳುತ್ತಿದ್ದಂತೆಯೇ ದ್ವೇಷದ ರಾಜಕಾರಣ ಹೆಚ್ಚಾಗಿದೆ. ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಮೇಲೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಇಷ್ಟು ವರ್ಷ ಬೇಕಾಗಿತ್ತಾ ಎಂದು ವಾಗ್ದಾಳಿ ನಡೆಸಿದರು .
ಶಿಷ್ಟಾಚಾರ ಪಾಲಿಸದಿದ್ದರೆ ಹಕ್ಕುಚ್ಯುತಿ ಮಂಡನೆ….. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳಿಗೆ ತಮ್ಮನ್ನು ಅಹ್ವಾನಿಸಿಲ್ಲ. ಈ ಕುರಿತು ಸಂಸತ್ತಿನಲ್ಲಿ ಹಕ್ಕುಚ್ಯುತಿ ಮಂಡಿಸುವುದಾಗಿ ಸಂಸದ ಸಂಸದ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ. ಶಿಷ್ಟಾಚಾರ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಕೆಲವು ಗ್ರಾಮಗಳಲ್ಲಿ ನಮ್ಮನ್ನು ಬಿಟ್ಟು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ರೀತಿ ಅನೇಕ ಗ್ರಾಮಗಳಲ್ಲಿ ಆಗುತ್ತಿದೆ. ಅಭಿವೃದ್ಧಿ ಪೂಕರವಾದ ವ್ಯಕ್ತಿ ನಾನು ನನ್ನ ಬಿಟ್ಟು ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆ ಸರಿಯಾಗಿ ಅನುಷ್ಠಾನ ಆಗುತ್ತಿಲ್ಲ. ಎಲ್ಲಿ ತಪ್ಪಾಗಿದೆ ನಾವು ಸರಿ ಮಾಡಬೇಕಿದೆ. ಒಂದೆರಡು ಕಾರ್ಯಕ್ರಮಕ್ಕೆ ನಮ್ಮನ್ನು ಕರೆದಿಲ್ಲ. ಅಧಿಕಾರಿಗಳು ಇಲ್ಲದೇ ಕಾಮಗಾರಿ ಪೂಜೆ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈ ರೀತಿ ಆಗಿದೆ ಎಂದು ದುರದೃಷ್ಟ ಎಂದರು.