
ಗಾಳೀಲಿ ಗುಂಡು ಹೊಡಿಬೇಡಿ..ಚರ್ಚೆಗೆ ಬನ್ನಿ
ತುರ್ತು ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಸಿದ್ದರಾಮಯ್ಯ ಸವಾಲು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ…