ಚಿಕ್ಕೋಡಿ
ರೈತರ ಪರ ಯಾವುದೇ ಯೋಜನೆಗಳು ಜಾರಿಗೆ ಬರುತ್ತಿಲ್ಲ ಎಂದು ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ, ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದರು.
ಕಾಗವಾಡ ವಿಧಾನಸಭಾ ಕ್ಷೇತ್ರದ ತಾವಂಶಿ ಗ್ರಾಮದಲ್ಲಿಂದು ಮಾತನಾಡಿದ ಅವರು, “ರೈತರು ಒಂದು ವರ್ಷ ಬೆಳೆಗಳನ್ನು ಬೆಳೆಯುವುದನ್ನು ಬಿಟ್ಟರೆ ನೀವೇನು ತಿಂತೀರಿ?. ನಿಮ್ಮ ಬಳಿ ಹಣ, ಬಂಗಾರ ಬೆಳ್ಳಿ ಸಾಕಷ್ಟಿರಬಹುದು. ಅದನ್ನು ತಿಂದು ಬದುಕೋಗಾಗುತ್ತಾ ಎಂದು ಪ್ರಶ್ನೆ ಮಾಡಿದರು.

“ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ. ಹೀಗೆಯೇ ಪರಿಸ್ಥಿತಿ ಮುಂದುವರಿದರೆ ವಿಧಾನಸೌಧದಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದ್ದೆ. ಆದರೆ ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ತೀಯಾ, ನಿನ್ನ ಕೆಲಸ ಮಾಡಿಕೊಡ್ತೀವಿ ಎಂದು ಭರವಸೆ ನೀಡಿದ್ದರಿ.

ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಂತಿಲ್ಲ, ಮೋಜು, ಮಸ್ತಿ ಮಾಡ್ತಿಲ್ಲ. ರೈತರ ಕಷ್ಟ-ಸುಖಗಳ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡ್ತಿದ್ದೇನೆ. ಆದರೆ ಸರ್ಕಾರದವರು ನಮಗೆ ಸ್ಪಂದಿಸುತ್ತಿಲ್ಲ. ಬೇಕಾದರೆ ನಾಳೆನೇ ಹೋಗಿ ರಾಜೀನಾಮೆ ಕೊಡ್ತೀನೆ” ಎಂದು ಆಕ್ರೋಶ ಹೊರಹಾಕಿದರು.
“